LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ನೆರವು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತೀ ತಿಂಗಳು ರೂ.2000 ,ಆರ್ಥಿಕ ಸಹಾಯ ಯೋಜನೆಯಡಿ ರೂ.30000 ಗಳ ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6018 ದೇವದಾಸಿ ಮಹಿಳೆಯರನ್ನು ಸಮೀಕ್ಷೆ ಯಲ್ಲಿ ಗುರುತಿಸಿದ್ದು 2653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೋಮ್ಮೆಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಸಚಿವರು ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿಕೇಂದ್ರ ಸರ್ಕಾರದಿಂದ 35 ಅಗತ್ಯ ಔಷಧಿಗಳ ಬೆಲೆ ಕಡಿತ!!ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವುಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸ್ಥಾಪಕ ಶಿಬು ಸೊರೇನ್ ನಿಧನಮಂಗಳೂರು: ಗಣಿ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ..!