LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನ

ಮೈಸೂರು: ಇಲ್ಲಿನ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ.

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದ ಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.

ಚಿತ್ರ ವೈರಲ್ ಆಗುತ್ತಿದ್ದಂತೆ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ.‌ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರರಸ್ತೆಬಂದ್‌ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ, ಕೇಜ್ರಿವಾಲ್‌, ಅಖಿಲೇಶ್‌ ಯಾದವ್‌ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್‌ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ. ಮೈ ತುಂಬಾ ಅರೇಬಿಕ್‌ ಬರಹಗಳನ್ನು ಹಾಕಿದ್ದು, ಅದಕ್ಕೆ ತ್ರೀ ಈಡಿಯೆಟ್ಸ್‌ ಎಂಬ ಶೀರ್ಷಿಕೆ ನೀಡಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!