Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾಂಕ್ಲೇವ್ ಗೆ ಚಾಲನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾಂಕ್ಲೇವ್–2026ಕ್ಕೆ ಭವ್ಯ ಚಾಲನೆ ನೀಡಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಸ್ವಾವಲಂಬಿಯಾಗಿ, ಸ್ವಾಭಿಮಾನಿಯಾಗೋಣ!ಎಂಬ ಘೋಷ ವಾಕ್ಯದೊಂದಿಗೆ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ವತಿಯಿಂದ ಇಂದಿನಿಂದ 3 ದಿನಗಳ ಕಾಲ ನಡೆಯುಲಿರುವ ವೀರಶೈವ ಲಿಂಗಾಯತ ಜಾಗತಿಕ ವ್ಯಾಪಾರ ಸಮಾವೇಶ 2026’ ವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹಾಗೂ ಆಮಂತ್ರಿತ ಸಜ್ಜನ ಮಿತ್ರರೊಂದಿಗೆ ಸಚಿವ ಎಂ.ಬಿ ಪಾಟೀಲ್ ಉದ್ಘಾಟಿಸಿದರು.

ಸಮುದಾಯದ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಹಾನಗಲ್ ಕುಮಾರಸ್ವಾಮಿ, ಹರತಾಳ ರುದ್ರಗೌಡರು, ಸಿರಸಂಗಿ ಲಿಂಗರಾಜ ದೇಸಾಯಿ ಅವರ ಕೊಡುಗೆಗಳನ್ನು ಇದೇ ವೇಳೆ ಸ್ಮರಿಸಿದರು.

ಸಮುದಾಯದ ಯಶಸ್ವಿ ಉದ್ಯಮಿಗಳಾದ ವಿಆರ್ ಎಲ್ ಸಮೂಹದ ವಿಜಯ್ ಸಂಕೇಶ್ವರ, ರಮಣಶ್ರೀ ಸಂಸ್ಥೆಯ ಷಡಾಕ್ಷರಿ ಮೊದಲಾದವರ ಹಾಗೂ ಏಕಸ್ ಸಂಸ್ಥೆಯ ಮೂಲಕ ಕರ್ನಾಟಕದ ಕೀರ್ತಿಯನ್ನು ಜಗದಗಲ ಬೆಳಗುತ್ತಿರುವ ಅರವಿಂದ ಮೆಳ್ಳಿಗೇರಿ ಅವರ ಸಾಧನೆ ಮತ್ತು ಕೊಡುಗೆಗಳನ್ನು ಸಚಿವರು ವಿವರಿಸಿದರು.
ಈ ಎಲ್ಲ ಮಹನೀಯರ ಸಾಧನೆಗಳನ್ನು ಸ್ಫೂರ್ತಿಯಾಗಿ ಪಡೆದು ನಮ್ಮ ಯುವ ಉದ್ಯಮಿಗಳು ಉದ್ಯಮ ಸ್ಥಾಪಿಸಿ
, ಉದ್ಯಮ ವಲಯದಲ್ಲಿ ಯಶಸ್ವೀ ಹೆಜ್ಜೆ ಇರಿಸಬೇಕು ಎಂದು ಸಚಿವರು ಕರೆ ನೀಡಿದರು.

ವೀರಶೈವ ಲಿಂಗಾಯತ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ನಡೆಯುತ್ತಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್ ಕ್ಲೇವ್ - 2026' ಸ್ಫೂರ್ತಿಯುತವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ವಿ ಉದ್ಯಮಿಗಳು ಉದಯಿಸಲಿದ್ದಾರೆಂಬ ವಿಶ್ವಾಸ ಮೂಡಿಸಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿ ಈಶ್ವರ ಖಂಡ್ರೆ,  ಶಾಸಕ ಗಣೇಶ್ ಹುಕ್ಕೇರಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಎಂಡಿ ಅರುಣ್ ಕುಮಾರ್ ಹಡಗಲಿ, ಉದ್ಯಮಿಗಳು, ಯುವ ಉದ್ಯಮಿಗಳು, ಚಿಂತಕರು ಇಂದಿನ ಬೃಹತ್ ಸಮಾವೇಶದಲ್ಲಿ ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ