Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ವರದಕ್ಷಿಣೆ ಪಿಡುಗು ಹಾಗೂ ಆಸಿಡ್ ದಾಳಿ ಕುರಿತು ಕಾನೂನು ಅರಿವು ಕಾರ್ಯಮ


ಮೂಡಲಗಿ : ಒಬ್ಬ ವ್ಯಕ್ತಿಯ ಮೇಲೆ ಉದ್ದೇಶ ಪೂರ್ವಕವಾಗಿ ಆಮ್ಲ ಅಥವಾ ಇತರ ದಹನಕಾರಿ ರಾಸಾಯನಿಕಗಳನ್ನು ಎರಚಿ, ಗಂಭೀರ ಗಾಯಗಳನ್ನು ಉಂಟುಮಾಡುವ ಕ್ರೂರ ಕೃತ್ಯಕ್ಕೆ ಆಸಿಡ್ ದಾಳಿ ಎನ್ನಬಹುದಾಗಿದೆ ಎಂದು ಮೂಡಲಗಿ ನ್ಯಾಯವಾದಿ ಸಂಘದ ಅಧ್ಯಕ್ಷರಾದ ಬಿ.ಎನ್. ಸಣ್ಣಕ್ಕಿ ಹೇಳಿದರು.
ಪಟ್ಟಣದ ಶ್ರೀ ಶ್ರೀಪಾದಭೋದ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೂಡಲಗಿಯ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇತರೆ ಇಲಾಖೆಗಳ ಸಹಯೋಗದಲ್ಲಿ ಜರುಗಿದ ವರದಕ್ಷಿಣೆ ಪಿಡುಗು ಹಾಗೂ ಆಸಿಡ್ ದಾಳಿ ಕುರಿತು ಕಾನೂನು ಅರಿವು ಕಾರ್ಯಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಸಿಡ್ ದಾಳಿಗಳು ಮುಖ್ಯವಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುತ್ತವೆ. ಕೆಲವು ಬಾರಿ ಪುರು?ರೂ ಕೂಡ ಇದರ ಬಲಿಪಶುಗಳಾಗಿದ್ದಾರೆ. ಪ್ರೀತಿಯ ನಿರಾಕರಣೆ, ಕೌಟುಂಬಿಕ ಕಲಹಗಳು, ಪ್ರತೀಕಾರದ ಮನೋಭಾವ, ಅಸೂಯೆ ಹಾಗೂ ಅನುಮಾನಗಳು ಇದಕ್ಕೆ ಪ್ರಮುಖ ಕಾರಣಗಳಾಗಿದ್ದು, ಆಸಿಡ್ ದಾಳಿಗೆ ತುತ್ತಾದವರು ನಿರ್ಭೀತರಾಗಿ ಬಿ.ಎನ್.ಎಸ್-೧೨೪ ಅಡಿ ಪ್ರಕರಣ ದಾಖಲಿಸಿ ಕಾನೂನು ನೆರವು ಪಡೆಯಬಹುದಾಗಿದೆ ಎಂದರು.
ನ್ಯಾಯವಾದಿ ಸಂಘದ ಉಪಾಧ್ಯಕ್ಷರಾದ ಲಕ್ಷ್ಮಣ ಅಡಿಹುಡಿ ವರದಕ್ಷಿಣೆ ಪಿಡುಗಿನ ಬಗ್ಗೆ ಉಪನ್ಯಾಸ ನೀಡುತ್ತಾ ಮಾತನಾಡಿ, ಮದುವೆಯ ಸಂದರ್ಭದಲ್ಲಿ ವರನ ಕಡೆಯವರು ವಧುವಿನ ಕಡೆಯವರಿಂದ ಹಣ, ಚಿನ್ನ, ಬೆಳ್ಳಿ, ವಾಹನ, ಆಸ್ತಿ ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಬೇಡುವುದು ಅಥವಾ ಪಡೆಯುವುದನ್ನು ವರದಕ್ಷಿಣೆ ಪದ್ಧತಿ ಎಂದು ಕರೆಯುತ್ತಾರೆ. ಈ ಪದ್ಧತಿಯಿಂದ ಮಹಿಳೆಯರು ಮತ್ತು ಅವರ ಕುಟುಂಬಗಳು ಆರ್ಥಿಕ ಹಾಗೂ ಮಾನಸಿಕ ತೊಂದರೆಗಳನ್ನು ಅನುಭವಿಸುವುದರಿಂದ ವರದಕ್ಷಿಣೆ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ವರದಕ್ಷಿಣೆ ಪಿಡುಗು ಮಹಿಳೆಯರ ಗೌರವ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ. ಇದನ್ನು ನಿರ್ಮೂಲನೆ ಮಾಡಲು ಜನರಲ್ಲಿ ಶಿಕ್ಷಣ ಮತ್ತು ಜಾಗೃತಿ ಮೂಡಿಸಬೇಕು, ಹೆಣ್ಣುಮಕ್ಕಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿ ವರದಕ್ಷಿಣೆ ರಹಿತ ಮದುವೆಗಳನ್ನು ಪ್ರೋತ್ಸಾಹಿಸಬೇಕು. ವರದಕ್ಷಿಣೆ ಮುಕ್ತ ಸಮಾಜವನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಅತಿಥಿಗಳಾಗಿ ಸಿಡಿಪಿಓ ಯಲ್ಲಪ್ಪ ಗದಾಡಿ, ನ್ಯಾಯವಾದಿ ಸಂಘದ ಸಹ ಕಾರ್ಯದರ್ಶಿಗಳಾದ ಆರ್.ಬಿ.ಮುಂಡಿಗನಾಳ, ಪ್ರಾಚಾರ್ಯರಾದ ಎಮ್.ವಾಯ್.ಕಂಬಾರ, ಪ್ರೊ. ಚೇತನರಾಜ್.ಬಿ, ಪ್ರೊ. ರಾಧಾ ಎಮ್.ಎನ್, ಮೂಡಲಗಿ ನ್ಯಾಯವಾದಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರೋ. ಶಿವಕುಮಾರ ಕೊಡಿಹಾಳ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕಾಶವ್ವಾ ಮರೆನ್ನವರ ಸ್ವಾಗತಿಸಿ, ಅಂಕಿತಾ ಸಣ್ಣಕ್ಕಿ ವಂದಿಸಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ