Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕಾನೂನು ಅರಿವು ಮಹಿಳೆಯರಿಗೆ ಅತ್ಯವಶ್ಯ... ರಾಧಾ ಮುರುಳೀಧರ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಾನೂನಿನ ಅರಿವು ಮಹಿಳೆಯರಿಗೆ ಇದ್ದರೆ ತಮಗಾದ ಅನ್ಯಾಯವನ್ನು ಎದುರಿಸಿ
, ನ್ಯಾಯ ಪಡೆಯುವ ಅವಕಾಶ ಮಹಿಳೆಯರಿಗೆ ಇರುತ್ತದೆ ಎಂದು ವಕೀಲರಾದ ರಾಧಾ ಮುರುಳೀಧರ್ ಹೇಳಿದರು.

 ನಗರದ  ಶ್ರೀ ಕಾಶಿ ವಿಶ್ವನಾಥ ದೇವಾಲಯದ  ಸಭಾ ಭವನದಲ್ಲಿ  ಶ್ರೀ ಕಾಶಿ ವಿಶಾಲಾಕ್ಷಿ ವಿಪ್ರ ವನಿತಾ ವೇದಿಕೆಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಕಾನೂನು ವೃತ್ತಿಯಲ್ಲಿ  ಮಹಿಳೆಯರು ಅಷ್ಟೊಂದು ತೊಡಿಸಿಕೊಳ್ಳದಿದ್ದರೂ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಕಾನೂನು ತಿಳಿದ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಸಂತಸದ ಸಂಗತಿ.  ಏಕೆಂದರೆ ಕಾನೂನು ತಿಳಿದುಕೊಂಡಾಗ ಸಮಾಜದಲ್ಲಿ ಪ್ರಬಲವಾಗಿ ಹೋರಾಟ ಮಾಡಲು ಸಾಧ್ಯವಾಗುತ್ತದೆ.

  ಆ ನಿಟ್ಟಿನಲ್ಲಿ ನಾವು ಮಹಿಳೆಯರಿ ಗಾಗುತ್ತಿರುವ   ಅನ್ಯಾಯದ ವಿರುದ್ಧ ಹೋರಾಟಕ್ಕೆ  ಸಹಕಾರ ನೀಡಬೇಕಾಗಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಬೇಕಿದೆ ಎಂದರು.

   ಮಹಿಳಾ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮೀ ಮಾತನಾಡಿ, ಸಮಾಜದಲ್ಲಿ ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಹೆಚ್ಚಾಗುತ್ತಿರುವುದು ವಿಷಾದಕರ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ  ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ.

  ನಮ್ಮ ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೂ ಸಮಾನವಾದ ಕಾನೂನಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ  ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ವೇದಿಕೆಯ  ಅದ್ಯಕ್ಷೆ  ರೂಪ ರಘುನಾಥ , ಮಹಿಳಾ ಸಮಾಜದ ಅದ್ಯಕ್ಷೆ  ವತ್ಸಲ ಜಗನಾಥ್, ನಗರಸಭಾ ಸದಸ್ಯೆ ಇಂದ್ರಾಣಿ,    ಶ್ರೀ ಕಾಶಿ ವಿಶಾಲಾಕ್ಷಿ ವಿಪ್ರ ವನಿತಾ ವೇದಿಕೆಯ ಉಪಾಧ್ಯಕ್ಷೆ ಲಕ್ಷ್ಮಿ ವೇಣುಗೋಪಾಲ್ಕಾರ್ಯದರ್ಶಿ  ಗಾಯತ್ರಿ ಪ್ರಸಾದ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ