ಚಿಕ್ಕಮಗಳೂರು :
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಚಿಕ್ಕಮಗಳೂರಿನಿಂದ ಸಿ.ಟಿ. ರವಿ ಅವರಿಗೆ ಮತ ನೀಡಿ ಗೆಲ್ಲಿಸಿ, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.
ಈಶ್ವರಪ್ಪ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸೋಮವಾರ ಮೈಸೂರಿನಲ್ಲಿ ಮಾತನಾಡಿದ್ದ ರವಿ ಅವರು ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.