Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ: ಮಧು ಬಂಗಾರಪ್ಪ

ನಾಗನೂರ ಪಿ.ಕೆ. ಸರಕಾರಿ ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ




ಅಥಣಿ: ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ ಸಮಾಜದ ಗಣ್ಯರು ಕೈಜೋಡಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಅಥಣಿ ತಾಲೂಕಿನ ನಾಗನೂರ ಪಿ.ಕೆ. ಗ್ರಾಮದ ಉನ್ನತೀಕರಿಸಿದ ಸರಕಾರಿ ಕನ್ನಡ ಹಿರಿಯ ಹಾಗೂ ಪ್ರೌಢಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ. ರಾಜ್ಯದಲ್ಲಿ ಸುಮಾರು 46 ಸಾವಿರ ಸರಕಾರಿ ಶಾಲೆಗಳಿದ್ದು, 58 ಲಕ್ಷ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸರಕಾರ 44 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಅಲ್ಲದೆ, 1500 ಶಾಲೆಗಳ ಅಭಿವೃದ್ಧಿಗೆ 4200 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಸರಕಾರಿ ಶಾಲೆಗಳ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರಕಾರ ಜಾರಿಗೆ ತಂದಿರುವ "ನಮ್ಮ ಶಾಲೆ, ನಮ್ಮ ಜವಾಬ್ದಾರಿ" ಯೋಜನೆಯಡಿ ರಾಜಕಾರಣಿಗಳು ಹಾಗೂ ಸಾರ್ವಜನಿಕರು ಶಾಲೆಗಳ ಅಭಿವೃದ್ಧಿಗೆ ನೆರವಾಗಬೇಕು. ನಾನು ಕೂಡ ತಮ್ಮ ತಂದೆ ಓದಿದ ಶಾಲೆಯ ಅಭಿವೃದ್ಧಿಗಾಗಿ 10 ಲಕ್ಷ ದೇಣಿಗೆ ನೀಡಿದ್ದೇನೆ ಎಂದು ಹೇಳಿದರು
ಶಿಕ್ಷಣವೇ ಮನುಷ್ಯನನ್ನು ಶ್ರೇಷ್ಠನನ್ನಾಗಿಸುತ್ತದೆ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ, ಮನುಷ್ಯನನ್ನು ಶ್ರೇಷ್ಠನನ್ನಾಗಿ ಮಾಡುವ ಶಕ್ತಿ ಶಿಕ್ಷಣಕ್ಕಿದೆ. ಜೀವ ವಿಕಾಸದಲ್ಲಿ ಮನುಷ್ಯನಿಗೆ ಇತರ ಜೀವಿಗಳಂತೆ ಅಪಾರ ದೈಹಿಕ ಶಕ್ತಿ, ವೇಗ ಅಥವಾ ಆಕರ್ಷಕ ಬಣ್ಣಗಳಿಲ್ಲ. ಆದರೆ ಬುದ್ಧಿವಂತಿಕೆ ಮತ್ತು ಆ ಬುದ್ಧಿಗೆ ಬೆಳಕು ನೀಡುವ ಶಿಕ್ಷಣದ ಮೂಲಕ ಮನುಷ್ಯ ಇತರ ಜೀವಿಗಳಿಗಿಂತ ವಿಶಿಷ್ಟನಾಗಿದ್ದಾನೆ. ಜೀವನದಲ್ಲಿ ಸಂಕಷ್ಟಗಳು ಎದುರಾದಾಗ, ನಮ್ಮವರು ದೂರವಾದಾಗ ಹಾಗೂ ಕತ್ತಲೆಯ ಹಾದಿಯಲ್ಲಿ ಸಾಗಬೇಕಾದಾಗ ಮನುಷ್ಯನೊಳಗಿನ ಜ್ಞಾನವೇ ದಾರಿದೀಪವಾಗುತ್ತದೆ. ಆದ್ದರಿಂದ ಶಿಕ್ಷಣವೆಂಬುದು ಕೇವಲ ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠವಲ್ಲ; ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಸವಾಲುಗಳನ್ನು ಎದುರಿಸುವ ಮತ್ತು ಸಮಾಜಕ್ಕೆ ಕೊಡುಗೆ ನೀಡುವ ಶಕ್ತಿಯಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಬಡತನದ ಕಾರಣದಿಂದ ಯಾವುದೇ ಮಗು ವಿದ್ಯೆಯಿಂದ ವಂಚಿತವಾಗಬಾರದು. ಈ ಮಹತ್ತರ ಉದ್ದೇಶದೊಂದಿಗೆ ಸರಕಾರ ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ಪ್ರಯತ್ನಗಳು ಶ್ಲಾಘನೀಯ. ಇಂತಹ ಕಾರ್ಯಗಳಿಗೆ ಇನ್ನಷ್ಟು ಶಕ್ತಿ ದೊರೆಯಲಿ. ಶಾಲೆಯ ಶತಮಾನೋತ್ಸವವು ಕೇವಲ ಕಟ್ಟಡವೊಂದರ ನೂರು ವರ್ಷದ ಸಂಭ್ರಮವಲ್ಲ. ಅದು ನೂರು ವರ್ಷಗಳಿಂದ ಜ್ಞಾನವನ್ನು ಹಂಚುತ್ತಾ, ಗ್ರಾಮೀಣ ಮಕ್ಕಳ ಬದುಕಿನಲ್ಲಿ ಅಕ್ಷರದ ಬೆಳಕು ಮೂಡಿಸುತ್ತಾ ಬಂದಿರುವ ಶಿಕ್ಷಣ ಮಂದಿರದ ಸಾಧನೆಯಾಗಿದೆ. ದೀಪದ ಬೆಳಕೂ ಇಲ್ಲದ ಗುಡಿಸಲುಗಳಲ್ಲಿ ಬದುಕುವ ಮಕ್ಕಳ ಹೃದಯದಲ್ಲಿ ಅಕ್ಷರದ ದೀಪವನ್ನು ಹಚ್ಚುವ ಮಹತ್ತರ ಕಾರ್ಯವನ್ನು ಶಾಲೆಗಳು ಮಾಡುತ್ತಿವೆ ಎಂದು ಭಾವುಕರಾಗಿ ನುಡಿದರು.

ಹೆತ್ತವರ, ಮಣ್ಣಿನ ಹಾಗೂ ಗುರುಗಳ ಋಣ ಮರೆಯಬಾರದು: ಲಕ್ಷö್ಮಣ ಸವದಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿ ಸಚಿವ ಲಕ್ಷö್ಮಣ ಸವದಿ, ಹೆತ್ತ ತಂದೆ-ತಾಯಿಯ ಋಣ, ನಾವು ಹುಟ್ಟಿ ಬೆಳೆದ ಮಣ್ಣಿನ ಋಣ ಹಾಗೂ ನಮಗೆ ಜ್ಞಾನ ನೀಡಿದ ಗುರುಗಳ ಋಣವನ್ನು ಜೀವನದಲ್ಲಿ ಎಂದಿಗೂ ಮರೆಯಬಾರದು. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಗುರುಗಳಿಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗ್ರಾಮೀಣ ಭಾಗದ ಶಾಲೆಗಳು ಅನೇಕ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರಗಳಾಗಿವೆ. ಇಂತಹ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಶತಮಾನೋತ್ಸವ ಆಚರಿಸುತ್ತಿರುವ ನಾಗನೂರ ಪಿ.ಕೆ. ಸರಕಾರಿ ಶಾಲೆಯು ನೂರು ವರ್ಷಗಳ ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ಹೆಮ್ಮೆಯ ಸಂದರ್ಭವಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಗಣ್ಯರು ಹಾಗೂ ಮಠಾಧೀಶರು ಆಗಮಿಸಿ ಆಶೀರ್ವಚನ ನೀಡಿರುವುದು ಶಾಲೆಯ ಅಭಿವೃದ್ಧಿಗೆ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಬಾಕ್ಷ: 1
ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 17,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಜನವರಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರಕಾರಿ ಶಾಲೆಗಳ ಮಕ್ಕಳಿಗೆ ಸರಕಾರದ ವತಿಯಿಂದಲೇ ನೋಟ್ ಬುಕ್ಕಗಳನ್ನು ಒದಗಿಸುವ ಯೋಜನೆಯನ್ನೂ ರೂಪಿಸಲಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಮಹತ್ತರ ಬದಲಾವಣೆಗಳನ್ನು ತರುತ್ತಿದ್ದೇವೆ
ಮಧು ಬಂಗಾರಪ್ಪ, ಶಿಕ್ಷಣ ಸಚಿವರು ಕರ್ನಾಟಕ ಸರಕಾರ ಬೆಂಗಳೂರು
ಈ ವೇಳೆ ವಿ ಪ ಸದಸ್ಯ ಹಣಮಂತ ನಿರಾಣಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಕಾಶಿನಾಥ ಸವದಿ, ಮುಖಂಡರಾದ ಚಿದಾನಂದ ಸವದಿ, ಶಿವಕುಮಾರ ಸವದಿ, ಸಂತೋಷ ಸಾವಡಕರ, ಶಿಕ್ಷಣ ಇಲಾಖೆ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಸುಭಾಸ ಸಂಪಗಾಂವಿ, ಡಿಡಿಪಿಐ ಅಜೀತ ಮನ್ನಿಕೇರಿ, ತಹಶೀಲ್ದಾರ ಸಿದರಾಯ ಭೋಸಗಿ, ಇಓ ಶಿವಾನಂದ ಕಲ್ಲಾಪೂರ, ಬಿಇಓ ಎಂ ಆರ್ ಮುಂಜಿ, ಡಿವೈಎಸ್‌ಪಿ ವಿರೇಂದ್ರ ಪಿ, ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ನಾಗನೂರು ಗ್ರಾಮಸ್ಥರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ