Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

 ನಿವೃತ್ತಿ ನೌಕರರ ಸಮಸ್ಯೆ ಸರ್ಕಾರ ಪರಿಹರಿಸಲಿ: ಡಾ. ಎಲ್. ಭೈರಪ್ಪ

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೇತ್ರಾಧಿಕಾರಿಗಳ ಸಂಘದಿಂದ  ದ್ವಿತೀಯ ರಾಜ್ಯಮಟ್ಟದ ‘ಹಳೆ ಬೇರು–ಹೊಸ ಚಿಗುರು’ ಸ್ನೇಹಕೂಟ- ಕಾರ್ಯಕ್ರಮ


ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವವರು ಅದೃಷ್ಟಶಾಲಿಗಳು. ಆರೋಗ್ಯ ಕ್ಷೇತ್ರದ ಸೇವೆ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ಎಲ್. ಭೈರಪ್ಪ ಹೇಳಿದರು.
ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೇತ್ರಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಿದ್ದ ದ್ವಿತೀಯ ರಾಜ್ಯಮಟ್ಟದ ‘ಹಳೆ ಬೇರು–ಹೊಸ ಚಿಗುರು’ ಸ್ನೇಹಕೂಟ-2 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನ ಜೀವನದಲ್ಲಿ ಕಣ್ಣು ಅತ್ಯಂತ ಪ್ರಮುಖ ಅಂಗವಾಗಿದ್ದು,  ಈ ಸುಂದರ ಜಗತ್ತನ್ನು ನೋಡಿ ಆನಂದಿಸಬೇಕಾದರೆ,  ನೇತ್ರ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು. ನಿವೃತ್ತ ನೌಕರರ ವೇತನ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ನಿವೃತ್ತ ನೌಕರರಿಗೆ ಆರ್ಥಿಕ ಭದ್ರತೆ ದೊರೆಯಲು ಎಲ್ಲರೂ ಒಗ್ಗಟ್ಟಿನಿಂದ ಸಂಘಟಿತರಾಗಬೇಕು. ಸಂಘಟನೆ ಗಟ್ಟಿಯಾಗಿ ನಿಂತಾಗ ಮಾತ್ರ ನಮ್ಮ ಬೇಡಿಕೆಗಳಿಗೆ ಬಲ ಸಿಗಲಿದೆ ಎಂದು ಹೇಳಿದರು.
ನಿವೃತ್ತ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಹಿಂದೇಟು ಹಾಕಿದರೆ, ರಾಜ್ಯದ ಸುಮಾರು 5.80 ಲಕ್ಷ ನಿವೃತ್ತ ನೌಕರರನ್ನು ಸಂಘಟಿಸಿ ಆರ್ಥಿಕ ಭದ್ರತೆಗಾಗಿ ಹೋರಾಟ ನಡೆಸಬೇಕಾಗುತ್ತದೆ. ನಿವೃತ್ತ ಬದುಕು ನೆಮ್ಮದಿಯಿಂದ ಹಾಗೂ ಗೌರವಯುತವಾಗಿ ಸಾಗಬೇಕಾದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿವೃತ್ತ ನೌಕರರ ಸಮಸ್ಯೆಗಳನ್ನು ಆದ್ಯತೆಯಿಂದ ಪರಿಹರಿಸಬೇಕು ಎಂದು ಒತ್ತಾಯಿಸಿದರು.

60 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ಭಾಗ್ಯ ಕಲ್ಪಿಸಬೇಕು ಎಂಬ ಮನವಿಯ ಹಿನ್ನೆಲೆಯಲ್ಲಿ ಸರ್ಕಾರ ‘ಸಂಧ್ಯಾ ಕಿರಣ ಆರೋಗ್ಯ ’ ಯೋಜನೆಯನ್ನು ಜಾರಿಗೆ ತಂದಿದೆ. ನಿವೃತ್ತ ನೌಕರರು ಹಾಗೂ ಹಿರಿಯ ನಾಗರಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಿವೃತ್ತಿಯ ಬಳಿಕವೂ ಸಮಾಜಮುಖಿ ಸೇವೆ ಅಗತ್ಯ
ಮಾಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ಡಾ. ವಿ.ಡಿ. ಡಾಂಗಿ ಮಾತನಾಡಿ, ಸೇವಾ ಅವಧಿಯ ನಂತರವೂ ಸ್ನೇಹಕೂಟ ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಆರ್.ಟಿ. ಪ್ರಕಾಶ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಇಂತಹ ಕಾರ್ಯಕ್ರಮಗಳು ನಿವೃತ್ತರ ಮನಸ್ಸಿಗೆ ನೆಮ್ಮದಿ ಮತ್ತು ಸಂತೃಪ್ತಿ ನೀಡುತ್ತವೆ. ಸೇವಾ ಅವಧಿಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ನಿವೃತ್ತಿ ಬದುಕು ಅರ್ಥಪೂರ್ಣ ಹಾಗೂ ಸುಂದರವಾಗಿರುತ್ತದೆ. ಸೇವಾ ಅವಧಿಯಲ್ಲಿ ನಾವು ಮತ್ತೊಬ್ಬರಿಗೆ ‘ಕಣ್ಣಾಗಿ’ ನಿಲ್ಲಬೇಕು. ನಾವು ಬೆಳೆಯುವುದರ ಜೊತೆಗೆ ನಮ್ಮೊಂದಿಗೆ ಇರುವವರನ್ನೂ ಬೆಳೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೇತ್ರಾಧಿಕಾರಿಗಳ ಸಂಘದ ರಾಜಾಧ್ಯಕ್ಷ  ಆರ್.ಟಿ. ಪ್ರಕಾಶ, ಅವರು ಪ್ರಾಸ್ತಾವಿಕವಾಗಿ ಮಾತನಾಡಿ,  ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮವು 1983ರ ಜನವರಿ 1ರಿಂದ ಆರಂಭಗೊಂಡಿದ್ದು, ಅಂದಿನಿಂದ ಸೇವೆ ಸಲ್ಲಿಸಿ ನಿವೃತ್ತರಾದ ನೇತ್ರಾಧಿಕಾರಿಗಳನ್ನು ಒಂದೇ ವೇದಿಕೆಯಡಿ ಸಂಘಟಿಸುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಕಳೆದ 26 ವರ್ಷಗಳಿಂದ ನಿವೃತ್ತಿಯಾಗಿರುವ ಎಲ್ಲ ನೇತ್ರಾಧಿಕಾರಿಗಳನ್ನು ಸಂಘದೊಂದಿಗೆ ಒಗ್ಗೂಡಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಮುಂದಿನ ದಿನಗಳಲ್ಲಿ ಸಂಘದ ಮೂಲಕ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕುರಿತು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ.ಪಿ. ಗಡದ,  ಡಾ. ಗೀತಾ ಕಾಂಬಳೆ, ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಜಿ. ಸಿದ್ನಾಳ, ಕಾರ್ಯದರ್ಶಿ ರಂಗೇಗೌಡ, ಎಸ್.ಎಂ. ಆನಂದಪ್ಪ, ಸುಂದರ ರಾಜ, ನಾರಾಯಣ ಪ್ರಸಾದ, ಅಣ್ಣಾರಾವ ಎನ್. ಬೀದರ, ಟಿ.ಬಿ. ಶ್ರೀನಿವಾಸ ಮೂರ್ತಿ, ಪರಮೇಶ್ವರಪ್ಪ ಕೆ.ಎಂ., ಶಾಂತರಾಜ ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ