Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯಾರ್ಥಿಗಳು ಹೊಸ ಹೊಸ ಆವಿಷ್ಕಾರಗಳತ್ತ ಮುನ್ನಡೆಯಲಿ

ಅಂತಾರಾಷ್ಟ್ರೀಯ ICCMN-2026 ಸಮ್ಮೇಳನ ಉದ್ಘಾಟನೆಯಲ್ಲಿ ಡಾ.ವಿದ್ಯಾಶಂಕರ್ ಎಸ್‌ ಆಶಯ

ಹಸಿರು ಕ್ರಾಂತಿ ವರದಿ ಬೆಳಗಾವಿ

ಪ್ರಸ್ತುತ ಜಗತ್ತಿನಲ್ಲಿ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ಶಿಕ್ಷಣ, ಆರೋಗ್ಯ, ಕೈಗಾರಿಕೆ ಮತ್ತು ಸಂವಹನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನಗಳು ಮಹತ್ವದ ಬದಲಾವಣೆಗಳನ್ನು ತರುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೊಸ ಹೊಸ ಆವಿಷ್ಕಾರಗಳತ್ತ ಗಮನಹರಿಸಿ ಸಂಶೋಧನಾ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಉಪಕುಲಪತಿ ಡಾ.ವಿದ್ಯಾಶಂಕರ್ ಎಸ್ ಹೇಳಿದರು.

ನಗರದ ಉದ್ಯಮಬಾಗದಲ್ಲಿರುವ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‌ ರಿಸರ್ಚ್ (JCER) ವತಿಯಿಂದ ಕಾಲೇಜಿನ ಆವರಣದಲ್ಲಿ ಅ. 23ರಿಂದ ಎರಡು ದಿನಗಳ ಕಾಲ ಆಯೋಜಿಸಿರುವ ಅಂತಾರಾಷ್ಟ್ರೀಯ ICCMN-2026 ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‌ ರಿಸರ್ಚ್ ಈಗಾಗಲೇ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಸರನ್ನು ಗಳಿಸಿದೆ. ಕಾಲೇಜು ಹೊಸ ಸಂಶೋಧನೆಗಳು ಮತ್ತು ಆವಿಷ್ಕಾರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.

ಥಾಯ್ಲೆಂಡ್‌ನ ಸಂಶೋಧಕಿ ಡಾ.ಪರಿಂದಾ ಸೋಯಿಕಿಂಗ್ ಮಾತನಾಡಿ, ಶಿಕ್ಷಣ, ತಂತ್ರಜ್ಞಾನ ಹಾಗೂ ಭವಿಷ್ಯದ ಉದ್ಯೋಗ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಕ್ರಾಂತಿಕಾರಿ ಪರಿವರ್ತನೆಗಳನ್ನು ತರಲಿದೆ. ಉದಯೋನ್ಮುಖ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ವಿದ್ಯಾರ್ಥಿಗಳು ಹಾಗೂ ವೃತ್ತಿಪರರು ಅಗತ್ಯ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ.ಎಸ್.ವಿ.ಗೊರಬಾಳ ಮಾತನಾಡಿ, ಎರಡು ದಿನಗಳ ಸಮ್ಮೇಳನದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ತಜ್ಞರ ಉಪನ್ಯಾಸಗಳು, ಸಂವಾದಗಳು ಹಾಗೂ ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚೆಗಳು ನಡೆಯಲಿವೆ. ಸಂಶೋಧಕರು ತಮ್ಮ ಹೊಸ ಆವಿಷ್ಕಾರಗಳು ಮತ್ತು ಸಂಶೋಧನಾ ಫಲಿತಾಂಶಗಳನ್ನು ಹಂಚಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಹಾಗೂ ಕೈಗಾರಿಕಾ ಕ್ಷೇತ್ರಗಳ ನಡುವೆ ಸಹಯೋಗ ಬೆಳೆಸಿಕೊಳ್ಳಲು ಈ ಸಮ್ಮೇಳನ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಡಾ.ಪ್ರಕಾಶ ಕೆ. ಸೋನವಾಲ್ಕರ್ ಮಾತನಾಡಿ, ICCMN-2026 ಸಮ್ಮೇಳನವು ದೇಶ-ವಿದೇಶಗಳ ಸಂಶೋಧಕರು, ಶಿಕ್ಷಣ ತಜ್ಞರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪರಿಣಿತರನ್ನು ಒಂದೇ ವೇದಿಕೆಗೆ ತರುವ ಮೂಲಕ ಜ್ಞಾನ ವಿನಿಮಯ, ಸಂಶೋಧನಾ ಸಹಕಾರ ಮತ್ತು ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ತಾಂತ್ರಿಕ ಸಮ್ಮೇಳನ ಆಯೋಜಿಸುವ ಮೂಲಕ ಸಂಶೋಧನೆ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಆವಿಷ್ಕಾರಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವುದು JCER ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಲೆಕ್ಟ್ರಿಕಲ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ ಆಫ್ ವೊಕೇಶನಲ್ ಎಜುಕೇಶನ್, ಸೆಂಟ್ರಲ್ ರೀಜನ್-3ರ ಬ್ಯಾಚುಲರ್ ಪದವಿ ಕಾರ್ಯಕ್ರಮದ ಅಧ್ಯಕ್ಷೆ ಪರಿಂದಾ ಸೋಕಿಂಗ್, ಡಾ.ವಿರೂಪಾಕ್ಷ ದಲಾಲ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಬೋಧಕ ಸಿಬ್ಬಂದಿ ಹಾಗೂ ಸಂಘಟನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

8 ದೇಶಗಳಿಂದ ಸಂಶೋಧನಾ ಪ್ರಬಂಧಗಳ ಸಲ್ಲಿಕೆ

ಸಮ್ಮೇಳನಕ್ಕೆ ದೇಶ-ವಿದೇಶಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 2,342 ಸಂಶೋಧನಾ ಪ್ರಬಂಧಗಳು ಸ್ವೀಕೃತವಾಗಿವೆ. ಕಠಿಣ ಪರಿಶೀಲನಾ ಪ್ರಕ್ರಿಯೆಯ ಬಳಿಕ 252 ಪ್ರಬಂಧಗಳನ್ನು ಅಂಗೀಕರಿಸಲಾಗಿದ್ದು, ಅವುಗಳಲ್ಲಿ 193 ಪ್ರಬಂಧಗಳು ನೋಂದಣಿಯಾಗಿವೆ. ಸಮ್ಮೇಳನದಲ್ಲಿ 26 ತಾಂತ್ರಿಕ ವಿಭಾಗಗಳು ಹಾಗೂ 562 ವಿಮರ್ಶಕರು ಭಾಗವಹಿಸುತ್ತಿದ್ದಾರೆ.

ಶ್ರೀಲಂಕಾ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ಥಾಯ್ಲೆಂಡ್, ಅಮೆರಿಕ ಮತ್ತು ಚೀನಾ ಸೇರಿದಂತೆ ಒಟ್ಟು ಎಂಟು ದೇಶಗಳಿಂದ ಸಂಶೋಧನಾ ಪ್ರಬಂಧಗಳು ಸ್ವೀಕೃತವಾಗಿವೆ. ವಿವಿಧ ದೇಶಗಳ ಸಂಶೋಧಕರು ತಮ್ಮ ಅಧ್ಯಯನ ಹಾಗೂ ಆವಿಷ್ಕಾರಗಳನ್ನು ಹಂಚಿಕೊಳ್ಳಲು ಸಮ್ಮೇಳನ ಅವಕಾಶ ಕಲ್ಪಿಸಿದೆ. ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ರಿಸರ್ಚ್‌ನ ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ. ಎಸ್.ವಿ. ಗೊರಬಾಳ್ ಅವರ ಮಾರ್ಗದರ್ಶನದಲ್ಲಿ ಸಮ್ಮೇಳನ ನಡೆಯುತ್ತಿದೆ.

ಸಂಶೋಧಕರು ತಮ್ಮ ಅಧ್ಯಯನದ ಫಲಿತಾಂಶಗಳನ್ನು ಪ್ರಸ್ತುತಪಡಿಸಲು, ಹೊಸ ಆಲೋಚನೆಗಳನ್ನು ಹಂಚಿಕೊಳ್ಳಲು ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮಗಳ ನಡುವೆ ಸಹಕಾರ ಬೆಳೆಸಿಕೊಳ್ಳಲು ಇಂತಹ ಸಮ್ಮೇಳನಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಅರಿತುಕೊಂಡು, ಸಮಾಜಕ್ಕೆ ಉಪಯುಕ್ತವಾಗುವ ಆವಿಷ್ಕಾರಗಳನ್ನು ಕೈಗೊಳ್ಳಬೇಕು.
-ಡಾ.ವಿದ್ಯಾಶಂಕರ್.ಎಸ್, ಉಪಕುಲಪತಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಬೆಳಗಾವಿ.

ವಿದ್ಯಾರ್ಥಿಗಳು ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಹೊಸ ಸಂಶೋಧನೆಗಳಿಗೆ ಒತ್ತು ನೀಡಬೇಕು. ನವೀನ ಆಲೋಚನೆಗಳು ಮತ್ತು ವೈಜ್ಞಾನಿಕ ಚಿಂತನೆಗಳ ಮೂಲಕ ಭವಿಷ್ಯದ ತಾಂತ್ರಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು.
-ಡಾ.ಎಸ್.ವಿ.ಗೊರಬಾಳ, ಪ್ರಾಂಶುಪಾಲ ಹಾಗೂ ನಿರ್ದೇಶಕರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ