Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಚನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯೋಣ: ಸತೀಶ ಜಾರಕಿಹೊಳಿ



ಚನ್ನಮ್ಮನ ಕಿತ್ತೂರು: ಕರ್ನಾಟಕ ಸರ್ಕಾರ, ಜಿಲ್ಲಾ ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ೨೦೨೬ನೇ ಸಾಲಿನ ೨೦೨ನೇ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ಸೋಮವಾರ ಪಟ್ಟಣದ ರಾಣಿ ಚನ್ನಮ್ಮ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ಬಾಬಾಸಾಹೇಬ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಿತ್ತೂರು ಉತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಹಾನಗಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧದ ಮೊದಲ ಹೋರಾಟದ ಬೆಳ್ಳಿಚುಕ್ಕಿಯಾಗಿದ್ದಾರೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಉತ್ಸವಕ್ಕಾಗಿ ?೨ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೊಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಮಾತನಾಡಿ, ಕಿತ್ತೂರು ಉತ್ಸವವನ್ನು ಹಿಂದೆ ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಸೇರಿ ಆಚರಿಸುತ್ತಿದ್ದರು. ದಿವಂಗತ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಸರ್ಕಾರದ ವತಿಯಿಂದ ಉತ್ಸವ ಆಚರಣೆಗೆ ಚಾಲನೆ ನೀಡಿದರು. ಇದೀಗ ಉತ್ಸವವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವ ಅಗತ್ಯವಿದೆ ಎಂದರು.
ಈ ಬಾರಿ ಸ್ಥಳೀಯ ಕಲಾವಿದರಿಗೆ ಕಡ್ಡಾಯವಾಗಿ ಅವಕಾಶ ನೀಡಬೇಕು. ಕಲಾವಿದರ ಪಟ್ಟಿಯನ್ನು ಮುಂಚಿತವಾಗಿಯೇ ಸಿದ್ಧಪಡಿಸಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಹಲವು ಮಹನೀಯರನ್ನು ಗೌರವಿಸಿಲ್ಲ ಎಂಬ ಅಭಿಪ್ರಾಯಗಳಿವೆ. ಅಂತಹವರನ್ನು ಗುರುತಿಸಿ ಉತ್ಸವದಲ್ಲಿ ಗೌರವಿಸುವ ಕೆಲಸ ಮಾಡಲಾಗುವುದು. ಕಿತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆ ಬದಿಗಳಲ್ಲಿ ಬೆಳೆದಿರುವ ಕಸಕಂಟಿಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಪ್ರತಿವರ್ಷ ತಮ್ಮ ಇಲಾಖೆಯಿಂದ ?೫ ಕೋಟಿ ಅನುದಾನವನ್ನು ಪ್ರತ್ಯೇಕವಾಗಿ ನೀಡಲಾಗುತ್ತಿದ್ದು ಈ ವರ್ಷ ಸಹಿತ ಪಟ್ಟಣದ ಅಂವನ್ನು ಹೆಚ್ಚಿಸಲು ೫ ಕೋಟಿ ಹಣ ಮಂಜೂರು ಮಾಡಲಾಗಿದೆ ಎಂದ ಅವರು ಪಟ್ಟಣದ ಸ್ವಚ್ಛತೆ ಕಾಪಾಡುವುದು ಸರ್ಕಾರದ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ. ಕಿತ್ತೂರು ಉತ್ಸವವನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಬಾಬಾಸಾಹೇಬ ಪಾಟೀಲ ಮಾತನಾಡಿ, ಉತ್ಸವದ ಸಂದರ್ಭದಲ್ಲಿ ಸಣ್ಣಪುಟ್ಟ ತಪ್ಪುಗಳು ಸಂಭವಿಸುವುದು ಸಹಜ. ಅವುಗಳನ್ನು ದೊಡ್ಡದಾಗಿ ಬಿಂಬಿಸದೆ ಕಿತ್ತೂರು ಉತ್ಸವ ನಮ್ಮ ಮನೆಯ ಕಾರ್ಯಕ್ರಮ ಎಂಬ ಭಾವನೆಯಿಂದ ಎಲ್ಲರೂ ಸಹಕರಿಸಬೇಕು ಎಂದ ಅವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಣಿ ಚನ್ನಮ್ಮನವರ ಶೌರ್ಯ, ಸಾಹಸ ಮತ್ತು ಹೋರಾಟದ ಕುರಿತು ತಿಳಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಿತ್ತೂರು ಪಟ್ಟಣದ ಅಭಿವೃದ್ಧಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಹೆಚ್ಚಿನ ಅನುದಾನ ನೀಡಿದ್ದಾರೆ. ಎಲ್ಲರ ಸಹಕಾರದೊಂದಿಗೆ ಈ ಬಾರಿ ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ ಆಚರಿಸೋಣ ಎಂದರು.

ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ,ಈ ಬಾರಿಯ ಕಿತ್ತೂರು ಉತ್ಸವವು ಯುವಕರನ್ನು ಸಾಹಿತ್ಯ ಹಾಗೂ ಸಂಸ್ಕೃತಿಯತ್ತ ಕೊಂಡೊಯ್ಯುವಂತಿರಬೇಕು. ಮಹಿಳೆಯರಿಗೆ ಗೌರವ ನೀಡುವ ಉತ್ಸವವಾಗಬೇಕು. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಿತ್ತೂರು ಉತ್ಸವದ ಖ್ಯಾತಿ ಹೆಚ್ಚಬೇಕು. ಉತ್ಸವದ ಜೊತೆಗೆ ಕಿತ್ತೂರು ಪಟ್ಟಣವೂ ಅಭಿವೃದ್ಧಿಯಾಗಬೇಕು ಎಂದರು.
ನಿಚ್ಚಣಕಿ ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಮಾತನಾಡಿ ಕಿತ್ತೂರು ಉತ್ಸವವನ್ನು ದಸರಾ ಮಾದರಿಯಲ್ಲಿ ಆಚರಿಸುವ ಚಿಂತನೆ ಇದ್ದರೆ, ಮೈಸೂರಿನ ದಸರಾ ಮಾದರಿಯಲ್ಲಿ ಆನೆ ಅಂಬಾರಿಯಂತೆ ಕಿತ್ತೂರಿಗೂ ಆನೆಯನ್ನು ಕರೆತಂದು ಅದರ ಮೇಲೆ ಬೆಳ್ಳಿಯ ಚನ್ನಮ್ಮನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸುವ ಕುರಿತು ಪರಿಗಣಿಸಬೇಕು ಎಂದರು.
ಸಭೆಯಲ್ಲಿ ಕೇಳಿಬಂದ ಪ್ರಮುಖ ಸಲಹೆಗಳು:
ಗ್ರಾಮೀಣ ಪ್ರದೇಶಗಳಿಂದ ಉತ್ಸವಕ್ಕೆ ಆಗಮಿಸುವವರಿಗೆ ಹೆಚ್ಚಿನ ಬಸ್ಗಳ ವ್ಯವಸ್ಥೆ ಮಾಡಬೇಕು. ಉತ್ಸವದ ಕಾಮಗಾರಿಗಳನ್ನು ಟೆಂಡರ್ ಮೂಲಕ ಕೈಗೊಂಡು ಅನುದಾನದ ಹಣ ಉಳಿತಾಯ ಮಾಡಬೇಕು ಎಂದು ಹಬೀಬ ಶಿಲ್ಲೆದಾರ ಸಲಹೆ ನೀಡಿದರು.
ಉತ್ಸವದ ಪೂರ್ವಭಾವಿ ಸಭೆಯನ್ನು ಕನಿಷ್ಠ ಎರಡು ತಿಂಗಳು ಮುಂಚಿತವಾಗಿ ಕರೆಯಬೇಕು. ಕಲಾವಿದರ ಗೌರವಧನ ಬಾಕಿ ಉಳಿಸಬಾರದು ಎಂದು ಸಂಜೀವ ಲೋಕಾಪೂರ ಹೇಳಿದರು.
ಉತ್ಸವಕ್ಕೆ ಹೆಚ್ಚಿನ ಅನುದಾನ ಬರುತ್ತಿದ್ದು, ಅದಕ್ಕೆ ತಕ್ಕಂತೆ ಉತ್ಸವದ ಸ್ವರೂಪವೂ ಬದಲಾಗಬೇಕು ಎಂದು ಸೈಯದ್ ಮನ್ಸೂರು ಹೇಳಿದರು.
ಪ್ರತಿವರ್ಷ ಒಂದೇ ವ್ಯಕ್ತಿಗಳು ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಬದಲು ಹೊಸಬರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಅವಕಾಶ ನೀಡಬೇಕು ಎಂದು ಚಂದ್ರಗೌಡ ಪಾಟೀಲ ಸಲಹೆ ನೀಡಿದರು.
ಹೃದಯ ರೋಗ ತಜ್ಞೆ ಹಾಗೂ ಸಾಹಿತಿ ಡಾ. ವಿಜಯಲಕ್ಷ್ಮಿ ಬಾಳೆಕುಂದರಗಿ ಅವರಿಂದ ಉತ್ಸವ ಉದ್ಘಾಟನೆ ಮಾಡಿಸಬೇಕು ಎಂದು ಬಸವರಾಜ ಚಿನಗುಡಿ ಒತ್ತಾಯಿಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರನ್ನು ಆಹ್ವಾನಿಸಿ ಉತ್ಸವ ಉದ್ಘಾಟನೆ ಮಾಡಿಸಬೇಕು ಎಂದು ಬಿ.ಎಂ. ಚಿಕ್ಕನಗೌಡರ ಸಲಹೆ ನೀಡಿದರು.
ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರನ್ನು ಉತ್ಸವದ ಕಾರ್ಯಕ್ರಮಗಳಲ್ಲಿ ಗೌರವದಿಂದ ಪರಿಗಣಿಸಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಫ್. ಜಕಾತಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಉಪವಿಭಾಗಾಧಿಕಾರಿ ಪ್ರವೀಣ ಜೈನ್, ಶಿಕ್ಷಣ ಇಲಾಖೆಯ ನಿರ್ದೇಶಕಿ ಲೀಲಾವತಿ ಹಿರೇಮಠ, ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನಾನಾಸಾಹೇಬ ಪಾಟೀಲ, ಕೆಎಸ್‌ಆರ್ಟಿಸಿ ಉಪಾಧ್ಯಕ್ಷ ಸುನೀಲ ಹಣಮಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಕಲಗೌಡ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ. ತುಬಾಕದ, ಕ್ಯುರೇಟರ್ ರಾಘವೇಂದ್ರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಪಟ್ಟಣದ ನಾಗರಿಕರು ಹಾಗೂ ರಾಣಿ ಚನ್ನಮ್ಮನ ಅಭಿಮಾನಿಗಳು ಉಪಸ್ಥಿತರಿದ್ದರು. 
ಮಲ್ಲಿಕಾರ್ಜುನ ಕದಂ ನಿರೂಪಿಸಿ ವಂದಿಸಿದರು.
ಅದ್ದೂರಿ ಉತ್ಸವಕ್ಕೆ ವಿವಿಧ ಸಮಿತಿಗಳ ರಚನೆ: ಕಿತ್ತೂರು ಉತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ.
ಜಾನುವಾರು ಜಾತ್ರೆ: ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಆಯೋಜಿಸಲು ನಿರ್ಧರಿಸಲಾಗಿದೆ.
ಏರ್ ಶೋ: ಉತ್ಸವಕ್ಕೆ ವಿಶೇಷ ಮೆರುಗು ನೀಡಲು ಏರ್ ಶೋ ಆಯೋಜಿಸಲಾಗುವುದು.
ಮೂರು ವೇದಿಕೆ: ಕೋಟೆ ಆವರಣದಲ್ಲಿ ಮುಖ್ಯ ವೇದಿಕೆ, ಶ್ರೀ ವೀರಭದ್ರ ದೇವಸ್ಥಾನದಲ್ಲಿ ಎರಡನೇ ವೇದಿಕೆ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಸಭಾಭವನದಲ್ಲಿ ಮೂರನೇ ವೇದಿಕೆ ನಿರ್ಮಿಸಲಾಗುವುದು.
ಚಿತ್ರ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ