LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಎಸ್‌ವೈ ಪ್ರಕರಣಗಳಲ್ಲಿ ಸುಪ್ರೀಂ ಪಕ್ಷಪಾತ ಮಾಡ್ತಿದೆ: ಮಧ್ಯಪ್ರವೇಶಿಸುವಂತೆ ಸಿಜೆಐಗೆ ಪತ್ರ

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಮನವಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2017ರಿಂದ ಬಾಕಿ ಉಳಿದಿರುವ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡಿದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ವಕೀಲ ಸಚಿನ್ ಪತ್ರ ಬರೆದಿದ್ದಾರೆ.

ಸಚಿನ್ ದೇಶಪಾಂಡೆ ಅವರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ 19ಕ್ಕೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಚರ್ಚೆ ಮಾಡದೇ ಬಿಎಸ್ ಯಡಿಯೂರಪ್ಪ ಅವರು ಕೋರಿದ ತಕ್ಷಣ ಬಹುತೇಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪಿಸಿ ಕಾಯ್ದೆಯಡಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ ಹಾಗೂ ಭ್ರಚಾರ ನಿಗ್ರಹ ದಳ ಸುಪ್ರೀಂ ಕೋರ್ಟನಲ್ಲಿ ಪ್ರಶ್ನಿಸಿದಾಗ ಸುಪ್ರೀಂ ಕೋರ್ಟ್ ಯಾವುದೇ ವಿವರಣೆ ನೀಡಿದೆ ತಡೆ ನೀಡಿದೆ. ಇದು ಬಿಎಸ್ ಯಡಿಯೂರಪ್ಪ ಪರವಾಗಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ನಡೆದುಕೊಂಡಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!