Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಶಿಕ್ಷಣ, ಉದ್ಯೋಗದಲ್ಲಿ ಲಿಂಗಾಯತರಿಗೆ ಹೆಚ್ಚಿನ ಪ್ರಾತಿನಿಧ್ಯ ಅಗತ್ಯ: ಎಂಬಿ ಪಾಟೀಲ್

ಬೆಂಗಳೂರು: ವೀರಶೈವರು, ಲಿಂಗಾಯತರು ನಾವೆಲ್ಲರೂ ಕೂಡಿ ಹೋರಾಟ ಮಾಡಿ ನಮ್ಮ ಸಮುದಾಯದ ಯುವ ಪೀಳಿಗೆಯವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಮ ಸಿಗುವಂತೆ ಮಾಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕರಾದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಹೇಳಿದರು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಸಮುದಾಯದ ನೂತನ ಸಚಿವರಿಗೆ ಹಾಗೂ ಶಾಸಕರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಪೀಠದ ಸ್ವಾಮೀಜಿಯವರು ಈ ಹೋರಾಟದ ನೇತೃತ್ವ ವಹಿಸಬೇಕು ಎಂದು ಕೋರಿದರು.

ಅನುಭವ ಮಂಟಪ, ದಾಸೋಹ, ಕಾಯಕ ಇಂತಹ ಮಹಾನ್ ಪರಿಕಲ್ಪನೆಗಳನ್ನು ಸಮಾಜಕ್ಕೆ ಕೊಟ್ಟ ಶ್ರೇಷ್ಠ ಸಂಸ್ಕೃತಿ ನಮ್ಮದಾಗಿದೆ. ಕುಂಬಾರರು, ಕಮ್ಮಾರರು ಸೇರಿದಂತೆ ಹಲವಾರು ಕಾಯಕ ವರ್ಗಗಳು ಸೇರಿರುವ ಸಮುದಾಯವು ಜಾತಿರಹಿತ ಸಮುದಾಯವಾಗಿದೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಕೂಡ ನಮ್ಮ ಸಮಾಜದ ಹಲವರು ದೊಡ್ಡಮಟ್ಟದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳನ್ನು ಮಾದರಿಯಾಗಿ ಇಟ್ಟುಕೊಂಡು ನಾವು ನಮ್ಮ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ಪಾಟೀಲ್ ಅಭಿಪ್ರಾಯಪಟ್ಟರು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಈ ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ಹೊಸದಾಗಿ ಆಯ್ಕೆಯಾದ ಸಮುದಾಯದ ಶಾಸಕರಿಗೆ ಹಾಗೂ ಸಚಿವರಿಗೆ ತಮ್ಮ ಜವಾಬ್ದಾರಿಯ ಮಹತ್ವವನ್ನು ನೆನಪಿಸುವ ಕಾರ್ಯ ಮಾಡಿದೆ ಎಂದು ಹೇಳಿದರು.

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಎಲ್ಲ ಲಿಂಗಾಯತ ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ