Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಲಿಂಗಾಯತ, ವೀರಶೈವ ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆ

ಶಿವಮೊಗ್ಗ: ಸಾಧಕರನ್ನು ಮಾತ್ರವೇ ಸಮಾಜ ಸ್ಮರಿಸುತ್ತದೆ. ಹೀಗಾಗಿ ಇಂದಿನ ಯುವಜನರು ಸಾಧನೆಯ ಉತ್ತುಂಗಕ್ಕೇರಬೇಕು, ಆ ಮೂಲಕ ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವೀರಶೈವ ಲಿಂಗಾಯತ ಮಹಾಸಭಾ, ಶಿವಮೊಗ್ಗ ಜಿಲ್ಲಾ ಘಟಕದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ನಗದು ಬಹುಮಾನ ಪ್ರದಾನ ಮಾಡಿ ಅವರು ಮಾತನಾಡಿದರು.

ನಮ್ಮಲ್ಲಿ ಹಲವರಿಗೆ ತಮ್ಮ ತಾತನ ಹೆಸರು ಮಾತ್ರ ತಿಳಿದಿದೆ. ಮುತ್ತಾತ ಹಾಗೂ ಪೂರ್ವಜರ ಹೆಸರೂ ತಿಳಿದಿಲ್ಲ. ಆದರೆ ಸಾಧಕರನ್ನು ದೀರ್ಘಕಾಲದವರೆಗೆ ಜನ ಸ್ಮರಿಸುತ್ತಾರೆ. ಹೀಗಾಗಿ ಯುವಜನರು ವಿದ್ಯಾವಂತರಾಗಿ, ಬುದ್ಧಿವಂತರಾಗಿ, ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.

ಅನ್ನ, ಅಕ್ಷರ ಮತ್ತು ಆಶ್ರಯ ಎಂಬ ತ್ರಿವಿಧ ದಾಸೋಹದ ಮೂಲಕ ಎಲ್ಲ, ಜಾತಿ, ಧರ್ಮದವರಿಗೂ ಗುಣಮಟ್ಟದ ಶಿಕ್ಷಣ ನೀಡಿದ ಕೀರ್ತಿ ನಮ್ಮ ಸಮಾಜದ ಮಠ ಮಾನ್ಯಗಳಿಗೆ ಸಲ್ಲುತ್ತದೆ. ನಾವು ನಮ್ಮ ಪೂರ್ವಜರ ಹಿರಿಮೆ ಕೊಂಡಾಡಿದರೆ ಸಾಲದು, ವರ್ತಮಾನದ ಜೀವಂತಿಕೆಯೊಂದಿಗೆ ಹೊರಹೊಮ್ಮಬೇಕು ಎಂದರು.

ಯುವಜನರೇ ಯಾವುದೇ ಸಮಾಜದ ಬಲ. ಇಂದಿನ ಸಮಾರಂಭದಲ್ಲಿ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾದ ಬಲಿದಾನ್ ಬ್ಯಾಡ್ಜ್ ಪುರಸ್ಕೃತೆ ಮೇಜರ್ ಡಾ. ದೀಕ್ಷಾ ಮುದದೇವಣ್ಣನವರ್ ನಮ್ಮೊಂದಿಗಿದ್ದಾರೆ. ಇಂತಹ ಸಾಧಕರು ನಿಮಗೆ ಪ್ರೇರಣೆಯಾಗಬೇಕು ಎಂದರು.

ಇಂದು ನಾವು ಆಧುನಿಕ ಸಮಾಜದಲ್ಲಿದ್ದೇವೆ. ಕೃತಕ ಬುದ್ಧಿಮತ್ತೆ, ಮೆಷನ್ ಲರ್ನಿಂಗ್ ಕಾಲಘಟ್ಟದಲ್ಲಿದ್ದೇವೆ. ಮನುಷ್ಯನೇ ನಿರ್ಮಿಸಿದ ಈ ತಂತ್ರಜ್ಞಾನ ಜನರ ಉದ್ಯೋಗವನ್ನೇ ಕಸಿಯುತ್ತಿದೆ. ಈ ನಿಟ್ಟಿನಲ್ಲಿ ಯುವಜನರು ವಿದ್ಯೆಯ ಜೊತೆಗೆ ಬುದ್ಧಿವಂತಿಕೆ, ಕೌಶಲ ಬೆಳೆಸಿಕೊಳ್ಳಬೇಕು ಎಂದರು.

ಮುಂದಿನ ಬಸವಜಯಂತಿಯೊಳಗೆ ಅನುಭವ ಮಂಟಪ ಸಾಕಾರ

ವಿಶ್ವಕ್ಕೇ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಕೊಟ್ಟ ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಭವ್ಯ, ದಿವ್ಯ ಅನುಭವಮಂಟಪ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ವರ್ಷ ಬಸವಜಯಂತಿಯೊಳಗೆ ಪೂರ್ಣಗೊಳಿಸಲು ಶ್ರಮಿಸುತ್ತಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

ತಾವು 2015-16ರಲ್ಲಿ ಸಚಿವನಾಗಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಗೆ ನಿಯೋಗ ಹೋಗಿ ಮನವಿ ಮಾಡಿದಾಗ ಅವರು ಅತ್ಯಾಧುನಿಕ ಅನುಭವ ಮಂಟಪ ನಿರ್ಮಿಸಲು ಅನುಮತಿಸಿದರು. ನಂತರ ಯಡಿಯೂರಪ್ಪನವರು 200 ಕೋಟಿ ರೂ. ನೀಡಿದರು. ಕಾಮಗಾರಿ ಆರಂಭವಾಯಿತು. ಮತ್ತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಬಳಿಕ ಮತ್ತು ಈಗ ಡಿ.ಕೆ. ಶಿವಕುಮಾರ್ ಅವರ ಕಾರ್ಯಕಾಲದಲ್ಲಿ 330 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು, ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ ಎಂದರು.

770 ಅಮರ ಗಣಂಗಳ ಸ್ಮರಣಾರ್ಥ 770 ಕಂಬಗಳ ಮೇಲೆ ಅನುಭವಮಂಟಪ ಕಟ್ಟಿದ್ದು, ಎಲ್ಲ ಕಂಬದಲ್ಲಿ ವಚನಗಳನ್ನು ಕೆತ್ತಿಸಲಾಗಿದೆ. ಇಲ್ಲಿ ವೈಜ್ಞಾನಿಕವಾಗಿ ಇಷ್ಟಲಿಂಗಪೂಜೆಯ ಪರಿಕಲ್ಪನೆಯನ್ನೂ ಸೇರಿಸಲಾಗಿದೆ ಎಂದರು. 

 ಕೆಳದಿ ಕರ್ನಾಟಕ ಎಂದು ಮಲೆನಾಡಿಗೆ ನಾಮಕರಣ ಮಾಡಬೇಕು ಎಂಬ ಸಮಾಜದ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ನಿಟ್ಟಿನಲ್ಲಿ ಪ್ರಯತ್ನ  ಮಾಡಲಾಗುವುದು ಎಂದರು. 

ವೀರಶೈವ ಲಿಂಗಾಯತ ಬೇರೆ ಬೇರೆ ಅಲ್ಲ. ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಿದ್ದಗಂಗಾಮಠದ ಲಿಂಗೈಕ್ಯ ಡಾ. ಶಿವಕುಮಾರಸ್ವಾಮೀಜಿ ಅವರೇ ಸ್ವಹಸ್ತಾಕ್ಷರದಲ್ಲಿ ಬರೆದುಕೊಟ್ಟಿದ್ದಾರೆ. ನಮ್ಮ ಸಮಾಜಕ್ಕೆ ಬಸವಾದಿ ಪ್ರಮಥರ, ರೇಣುಕಾದಿ ಆಚಾರ್ಯರ ಹಾಗೂ ಗುರುವಿರಕ್ತರ ಆಶೀರ್ವಾದವಿದ್ದು, ನಮ್ಮ ಸಮಾಜವನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು. 

ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಲಿಂಗೈಕ್ಯ ಭೀಮಣ್ಣ ಖಂಡ್ರೆ ಅವರು ವೀರಶೈವ ಲಿಂಗಾಯತ ಸಮಾಜವನ್ನು ಉಳಿಸುವುದರ ಜೊತೆಗೆ ಬೆಳೆಸುವ ಕೆಲಸ ಮಾಡಿದರು ಎಂದರು.

ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ. ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!