Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಸಾಹಿತ್ಯವು ಬದುಕಿಗೆ ಸ್ಫೂರ್ತಿ ನೀಡುವ ಶಕ್ತಿ ಹೊಂದಿದೆ: ಪ್ರೊ. ನಿತ್ಯಾನಂದ ಶೆಟ್ಟಿ

99ನೇ ಬೆಳಗಾವಿ ನಾಡಹಬ್ಬ ಉತ್ಸವದ ನಾಲ್ಕನೆಯ ದಿನದ ಕಾರ್ಯಕ್ರಮದಲ್ಲಿ ‘ "ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಭಾಷಾ ಸಂವರ್ಧನೆ" ಕಾರ್ಯಕ್ರಮ


ಬೆಳಗಾವಿ:  ಕಲೆ ಮತ್ತು ಸಾಹಿತ್ಯಕ್ಕೆ ಭಾಷೆಯ ಶ್ರೀಮಂತಿಕೆಯನ್ನು ಹೆಚ್ಚಿಸುವ ಶಕ್ತಿ ಇದೆ. ನಮ್ಮ ಭಾಷೆ, ನೆಲ, ನುಡಿ ಹಾಗೂ ಸಂಸ್ಕೃತಿ ನಮಗೆ ಆಭರಣವಿದ್ದಂತೆ. ಜಗತ್ತಿನ ಮೂಲೆ ಮೂಲೆಗಳಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಬೆಳೆದಾಗ ಮಾತ್ರ ಭಾಷೆಗೆ ನಿಜವಾದ ಶ್ರೇಯಸ್ಸು ದೊರೆಯುತ್ತದೆ ಎಂದು ತುಮಕೂರು ವಿಶ್ವವಿದ್ಯಾಲಯದ ಡಾ. ಡಿ.ವಿ.ಜಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಶೆಟ್ಟಿ ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ 99ನೇ ಬೆಳಗಾವಿ ನಾಡಹಬ್ಬ ಉತ್ಸವದ ನಾಲ್ಕನೆಯ ದಿನದ ಕಾರ್ಯಕ್ರಮದಲ್ಲಿ ‘ "ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಭಾಷಾ ಸಂವರ್ಧನೆ" ವಿಷಯದ ಕುರಿತು ಅವರು  ಮಾತನಾಡಿದರು.
ಸಾಹಿತ್ಯ ಆಧಾರಿತ ಕಥೆಗಳು, ಚಲನಚಿತ್ರಗಳು ಹಾಗೂ ನಾಟಕಗಳು ಜನರ ಬದುಕಿಗೆ ಸ್ಫೂರ್ತಿ ನೀಡುತ್ತವೆ. ಜಾಗತಿಕ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಗೌರವವಿದ್ದು, ಅದನ್ನು ಮತ್ತಷ್ಟು ವಿಸ್ತರಿಸುವ ಕೆಲಸವಾಗಬೇಕು. ನಮ್ಮ ನಾಡಹಬ್ಬಗಳು ಕಾಲಕಾಲಕ್ಕೂ ವೈಭವದಿಂದ ರಾರಾಜಿಸಬೇಕು. ಸಾಹಿತ್ಯವು ಶ್ರೀಮಂತ ಭಾಷೆಯ ಜೀವಾಳವಾಗಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಾಹಿತ್ಯದ ಸ್ಪರ್ಶ ಇರಬೇಕು. ಸಾಹಿತ್ಯದ ಕೊರತೆಯಿಂದಾಗಿ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಚಿತ್ರವೂ ನಿರೀಕ್ಷಿತ ಯಶಸ್ಸು ಕಾಣದೆ ವಿಫಲವಾಗಿರುವ ಉದಾಹರಣೆ ಇದೆ. ಆದ್ದರಿಂದ ಕಲೆ, ಸಿನಿಮಾ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಸಾಹಿತ್ಯಕ್ಕೆ ಮಹತ್ವ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಾಗತೀಕರಣದ ಇಂದಿನ ಯುಗದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಶಿಕ್ಷಣ, ತಂತ್ರಜ್ಞಾನ, ಸಾಹಿತ್ಯ, ಸಂಶೋಧನೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಿಸಬೇಕಿದೆ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಗ್ಗೂಡಿಸಿ ಕನ್ನಡ ಭಾಷಾ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ವಿಚಾರ ಸಂಕಿರಣಗಳು ಹಾಗೂ ಸಾಂಸ್ಕೃತಿಕ ಉತ್ಸವಗಳನ್ನು ಆಯೋಜಿಸುವುದರಿಂದ ಕನ್ನಡದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿಯಲು ಸಾಧ್ಯವಾಗುತ್ತದೆ.
ಕನ್ನಡ ಭಾಷೆಯ ಬೆಳವಣಿಗೆಗೆ ಯುವಜನತೆ ಹಾಗೂ ಮುಂದಿನ ಪೀಳಿಗೆಯಲ್ಲಿ ಭಾಷಾಭಿಮಾನ ಬೆಳೆಸುವುದು ಅತ್ಯಂತ ಮುಖ್ಯವಾಗಿದೆ. ಕನ್ನಡದ ಪ್ರಾಚೀನ ಸಾಹಿತ್ಯ, ವಚನ ಪರಂಪರೆ, ಜನಪದ ಕಲೆಗಳು ಹಾಗೂ ಶ್ರೀಮಂತ ಸಾಂಸ್ಕೃತಿಕ ಮೌಲ್ಯಗಳನ್ನು ವಿಶ್ವದ ಜನರಿಗೆ ಪರಿಚಯಿಸಲು ಅನುವಾದ ಕಾರ್ಯಗಳಿಗೆ ಉತ್ತೇಜನ ನೀಡಬೇಕು. ಈಗಿರುವ
 ಆಧುನಿಕ ತಂತ್ರಜ್ಞಾನ ಬಳಿಸಿಕೊಂಡು ನಮ್ಮ ಭಾಷೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಜ್ಞಾನ ಮತ್ತು ಸಂವಹನದ ಭಾಷೆಯಾಗಿ ಬೆಳೆಯಲು ಪ್ರತಿಯೊಬ್ಬ ಕನ್ನಡಿಗರೂ ಕೈಜೋಡಿಸಬೇಕು ಎಂದು ಹೇಳಿದರು..
ಕಿತ್ತೂರ ರಾಣಿ ಚನ್ನಮ್ಮ ವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಕಾರ್ಯದರ್ಶಿ  ವೈ.ಎಸ್. ಬಲವಂತಗೋಳ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡವು ಜಗತ್ತಿನ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದ್ದು, ತನ್ನದೇ ಆದ ಇತಿಹಾಸ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಆದರೆ, ನಮ್ಮ ನಾಡಿನ ಜನರೇ ಕನ್ನಡ ಭಾಷೆಗೆ ತಕ್ಕ ಗೌರವ ನೀಡದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
ನಮ್ಮ ಭಾಷೆಯನ್ನು ಮರೆತರೆ, ಅದನ್ನು ಜೀವಂತವಾಗಿಯೇ ಸಮಾಧಿ ಮಾಡಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಕನ್ನಡಿಗರೂ ನಾಡು, ನುಡಿ ಹಾಗೂ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯನ್ನು ಗೌರವಿಸುವುದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ನಿತ್ಯದ ಬದುಕಿನ ಭಾಗವಾಗಬೇಕು. ಕನ್ನಡ ಭಾಷೆಯನ್ನು ಪ್ರೀತಿಸಿ, ಗೌರವಿಸಿ, ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ಪರಿಚಯಿಸುವ ಕಾರ್ಯ ಎಲ್ಲರಿಂದಲೂ ನಡೆಯಬೇಕು ಎಂದು ಹೇಳಿದರು.
ಹಿರಿಯ ಜಾನಪದ ವಿದ್ವಾಂಸ ಡಾ. ರಾಮು ಮೂಲಗಿ ಅವರು ಮಾತನಾಡಿ,  ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಜೀವನದ ಪ್ರತಿಬಿಂಬವಾಗಿದೆ. ಆಧುನಿಕತೆಯ ಭರಾಟೆಯಲ್ಲಿ ಅರ್ಥಪೂರ್ಣ ಜಾನಪದ ಹಾಡುಗಳು ಮರೆಯಾಗುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು  ಹೇಳಿದರು.
ನಾಡಹಬ್ಬವು ಭಾವೈಕ್ಯತೆಯ ಸಂಕೇತವಾಗಿದೆ. ಪ್ರಸ್ತುತ ದಿನಗಳಲ್ಲಿ ಅಶ್ಲೀಲತೆಯಿಂದ ಕೂಡಿದ ಜಾನಪದ ಹಾಡುಗಳ ಹಾವಳಿಯಿಂದ ಪವಿತ್ರವಾದ ಜಾನಪದ ಕಲೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಈ ಬೆಳವಣಿಗೆ ಆತಂಕಕಾರಿಯಾಗಿದೆ. ರಾಣಿ ಚನ್ನಮ್ಮ ವಿದ್ಯಾಲಯವು ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾನಪದ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಾನಪದದ ಮೂಲಕ ನಾಡಿನ ಜನರ ಬದುಕು, ಸಾಮಾಜಿಕ ಸಮಸ್ಯೆಗಳು ಹಾಗೂ ಜನಜೀವನದ ನೈಜ ಚಿತ್ರಣವನ್ನು ಜಗತ್ತಿಗೆ ಪರಿಚಯಿಸಬಹುದು. ಆದರೆ, ಇಂದಿನ ಕೆಲವು ಯುವಕರು ಅರ್ಥ ಮತ್ತು ಸಾಹಿತ್ಯದ ಮೌಲ್ಯವಿಲ್ಲದ ಹಾಡುಗಳನ್ನು ಟ್ರ್ಯಾಕ್ಟರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಸಾರ ಮಾಡುತ್ತಾ ಸಮಾಜದ ಸಾಂಸ್ಕೃತಿಕ ಮೌಲ್ಯಗಳಿಗೆ ಧಕ್ಕೆ ತರುತ್ತವೆ‌ ಜಗತ್ತು ಎಷ್ಟೇ ಮುಂದುವರಿದರೂ ನಮ್ಮ ಮೂಲ ಸಂಸ್ಕೃತಿ, ಭಾಷೆ ಹಾಗೂ ಜಾನಪದ ಪರಂಪರೆಯನ್ನು ಮರೆಯಬಾರದು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಎಲ್‌ಇ ನಿರ್ದೇಶಕ ಡಾ. ಎಚ್.ಬಿ. ರಾಜಶೇಖರ ಸ್ವಾಗತಿಸಿದರು. ಕಾರ್ಯದರ್ಶಿ ಸಿ.ಕೆ. ಜೋರಾಪುರ, ಉಪಾಧ್ಯಕ್ಷ ಹಾಗೂ ನ್ಯಾಯವಾದಿ ಆರ್.ಪಿ. ಪಾಟೀಲ, ಡಾ. ಹುನಮಂತ ಸಂಜೀವಣ್ಣವರ, ವಿರೂಪಾಕ್ಷಯ್ಯ ಹಿರೇಮಠ, ವಿಜಯಾ ಹಿರೇಮಠ, ಡಾ. ಗಜಾನನ ನಾಯ್ಕ,  ಡಾ. ಎಚ್.ಬಿ. ತಿಮ್ಮಾಪೂರ, ಸೋಮಶೇಖರ ಮಾವಿನಕಟ್ಟಿ, ಜ್ಯೋತಿ ಬದಾಮಿ, ಜಯಶ್ರೀ ಮಾಳಗಿ, ಸುಪ್ರಿಯಾ ಕಲಾಚಂದ ನಾಡಗೀತೆ ಹಾಡಿದರು.  ಮಲ್ಲಿಕಾರ್ಜುನ ಪೂಜಾರಿ ನಿರೂಪಿಸಿದರು. ಡಾ. ಹೇಮಾ ಸೋನೊಳ್ಳಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ