LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ,ಬಿಎಸ್ಪಿ ಪಕ್ಷದಿಂದ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಾರ್ಟಿ ರಾಜ್ಯದ 28 ಕ್ಷೇತ್ರಗಳ ಪೈಕಿ 25ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕಚೇರಿಯಲ್ಲಿ ಮಾರಸಂದ್ರ ಮುನಿಯಪ್ಪ ತಿಳಿಸಿದರು.


ಬೆಂಗಳೂರಿನ ಬಾಂಬುಬಜರ್ ರಸ್ತೆಯಲ್ಲಿರುವ ಬಿಎಸ್ಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, 25ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ  ಮುನಿಯಪ್ಪ ಬಿಡುಗಡೆ ಮಾಡಿ ಮಾತನಾಡಿದ ಅವರು, ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಭಾರತ ದೇಶದ ಮಾನ್ಯತೆ ಪಡೆದ ರಾಷ್ಟೀಯ ಪಕ್ಷದಲ್ಲಿ 3ನೇ ಅತೀ ದೊಡ್ಡ ಪಕ್ಷವಾದ ಬಹುಜನ ಸಮಾಜ ಪಾರ್ಟಿಯ ರಾಷ್ಟೀಯ ಅಧ್ಯಕ್ಷರಾದಂತಹ ಬೆಹನ್‌ ಕುಮಾರಿ ಮಾಯವತಿಯವರ ಆದೇಶದಂತೆ ಕರ್ನಾಟಕ ರಾಜ್ಯದ 28 ಕ್ಷೇತ್ರಗಳ ಪೈಕಿ ಮೊದಲನೇ ಪರ್ಟಿಯನ್ನು ಬಿಡುಗಡೆ ಮಾಡಲಾಗಿದೆ.


ರಾಜ್ಯದಲ್ಲಿ 3 ಜಿಲ್ಲೆಗಳನ್ನು ಹೊರತುಪಡಿಸಿ 25 ಜಿಲ್ಲೆಗಳ ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೂಕ್ತ ಅಭ್ಯರ್ಥಿಗಳನ್ನು ಅಕ್ಕ ಮಾಯಾವತಿಯವರೇ ಅಂತಿಮಗೊಳಿಸಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಹಣ, ಮಧ್ಯ, ಹುಡುಗೊರೆ ನೀಡದೆ, ಯಾವುದೇ ಪಕ್ಷದ ಪ್ರಣಾಳಿಕೆಯನ್ನು ನೀಡದೆ, ಸಂವಿಧಾನವೇ ನಮ್ಮ ಪ್ರಣಾಳಿಕೆಯಾಗಿದೆ ಎಂದು ತಿಳಿಸಿದರು.


ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಲ್ಲಿರುವ ಹಾಗೆ ಸಾರ್ವಜನಿಕರಿಗೆ ಯಾವುದೇ ಆಮಿಷಗಳನ್ನು ಒದ್ದುವುದಿಲ್ಲ, ಜನರು ಪಕ್ಷ ಒಪ್ಪಿ,ಕೆಲಸ ಕಾರ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ಮತ ನೀಡಬೇಕೆಂದು ಕೇಳಿಕೊಂಡರು. ರಾಷ್ಟ್ರೀಯ ಪಕ್ಷಗಳು ಹಿಂದಿನಿಂದಲೂ, ಈಗಲೂ ವಾಮ ಮಾರ್ಘದಲ್ಲಿ ಚುನಾವಣೆಯನ್ನು ಗೆಲ್ಲುತ್ತಿರುವುದು ನೋಡುತಿದ್ದೇವೆ, ಅವೆಲ್ಲವನ್ನೂ ಬಿಟ್ಟು ಚುನಾವಣೆಯಲ್ಲಿ ಗೆಲುವನ್ನು ಪಡೆಯಲಿ ಎಂದು ಸವಾಲಾಕಿದರು.  ಇನ್ನು ಇದೇವೇಳೆ ಈ ಭಾರಿಯ ಚುನಾವಣೆಯಲ್ಲಿ 2ರಿಂದ 3 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಮಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.


ಇದೇ ವೇಳೆ ಬಹುಜನ ಸಮಾಜ ಪಾರ್ಟಿಯ ರಾಜ್ಯ ಖಜಾಂಚಿ ಡಾ. ಚಿನ್ನಪ್ಪ ವೈ.ಚಿಕ್ಕಹಾಗಡೆ ಮಾತನಾಡಿ, ಬೆಂಗಳೂರು ಗ್ರಾಮಾಂತರದಿಂದ ಅದರಲ್ಲೂ ಆನೇಕಲ್ ಕ್ಷೇತ್ರದಿಂದ ಸ್ಪರ್ಧೆ ಮಾಡಲಾಗಿದೆ, ನನಗೆ  ಉತ್ತಮ ಸ್ಪಂದನೆ ಸಿಕ್ಕಿದೆ, ಹೀಗಾಗಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಜನರ ಕಷ್ಟ, ನೋವು, ನಲಿವು ತಿಳಿಯುವ, ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಬಿಎಸ್ಪಿ ಪಕ್ಷದ ಉತ್ತರ, ದಕ್ಷಿಣ ಜಿಲ್ಲಾಧ್ಯಕ್ಷರು, ಟಿಕೆಟ್ ಸಿಕ್ಕಿರುವ ಅಭ್ಯರ್ಥಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು