LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಗಣಿ& ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಮತ್ತು ಚಾಲಕ ಲೋಕಾ ಬಲೆಗೆ

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ  ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿಯ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ ಫೈಲಿಗೆ  ಅನುಮತಿ  50 ಸಾವಿರ ಹಣ ತೆಗೆದುಕೊಳ್ಳಿ ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ದೂರುದಾರ ದೂರು ನೀಡಿದ್ದರು.

ಲಂಚದ ಹಣ 50 ಸಾವಿರ ರೂಪಾಯಿ ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿ ಮೇ.28 ರಂದು ದೂರುದಾರರ ಕೈಯಿಂದ ವಾಹನ ಚಾಲಕ ಮಧು ಎಂಬಾತನ ಮೂಲಕ ಉಪ ನಿರ್ದೇಶಕಿ ಕೃಷ್ಣ ವೇಣಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಅಗಿ ವಾಹನ ಚಾಲಕ ಮಧು ಮತ್ತು ಉಪ ನಿರ್ದೇಶಕಿ ಕೃಷ್ಣವೇಣಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಮಂಗಳೂರು  ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷರಾದ ಡಾ.ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ , ಉಡುಪಿ ಜಿಲ್ಲಾ ಲೋಕಾಯುಕ್ತ ಉಪ ನಿರೀಕ್ಷಕರಾದ ಮಂಜುನಾಥ,  ರಾಜೇಂದ್ರ ನಾಯಕ್ ಸಿಬ್ಬಂದಿ ಜೊತೆ  ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026