LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಲಗೇರಿ ಕೂಸಿನ ಮನೆಗೆ ಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡ ಭೇಟಿ

ಕೊಪ್ಪಳ ಏಪ್ರಿಲ್ 08: ಜಿಲ್ಲೆಯಲ್ಲಿರುವ ಕೂಸಿನ ಮನೆ ಕಾರ್ಯನಿರ್ವಹಣೆ ಕುರಿತು ಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡವು ಮಂಗಳವಾರ (ಏ.8ರಂದು) ಕೊಪ್ಪಳ ತಾಲೂಕಿನ ಹಲಗೇರಿಯ ಕೂಸಿನ ಮನೆಗೆ ಜೊಸೆಫ್ ಪೌಲ್ ಮತ್ತು ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

ಕೂಸಿನ ಮನೆಯಲ್ಲಿಯ ಮಕ್ಕಳ ದಾಖಲಾತಿ ರಜಿಸ್ಟರ್ ಪರಿಶೀಲಿಸಿ ಕೇರ್ ಟೆಕರ್‌ಗಳಿಗೆ ಹಣ ಪಾವತಿಯಾಗಿರುವ ಬಗ್ಗೆ ಸಂವಾದ ನಡೆಸಿತು. ನಂತರ ಪ್ರತಿ ದಿನ ಮಕ್ಕಳಿಗೆ ಮುಂಜಾನೆ ಮತ್ತು ಮಧ್ಯಾಹ್ನ ಆಹಾರ ವಿತರಣೆ ಕುರಿತು ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಕೇರ್ ಟೆಕರ್ಸ್ ವಿವರಿಸಿದರು.

ಕೂಸಿನ ಮನೆಗೆ ಬರುವ ಮಕ್ಕಳ ದಾಖಲಾತಿ, ಮಕ್ಕಳ ಆರೈಕೆ, ಪೌಷ್ಠಿಕ ಮತ್ತು ಅಪೌಷ್ಠಿಕ ಮಕ್ಕಳಿಗೆ ಮೆನು ಚಾರ್ಟ ಪ್ರಕಾರ ಆಹಾರ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಮಕ್ಕಳ ಆರೈಕೆದಾರರ ವೇತನಕ್ಕೆ ಸಂಬಂಧಿಸಿದ ವಹಿಗಳನ್ನು ಪರಿಶೀಲಿಸಿದರು. ಪಾಲಕರು ತಮ್ಮ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ಬರುತ್ತಿರುವದರಿಂದ ಆಗುತ್ತಿರುವ ಅನುಕೂಲತೆ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೂಲಿ ಕೆಲಸಕ್ಕೆ ಪಾಲಕರು ಹೋಗುತ್ತಿರುವದರಿಂದ ಮಕ್ಕಳ ಆರೈಕೆಗೆ ಕೂಸಿನ ಮನೆ ಬಹಳಷ್ಟು ಅನುಕೂಲವಾಗಿದೆ ಎಂದು ಪಾಲಕರಾದ ಸುನಂದಾ ವಿವರಿಸಿ, ಈ ಕೇಂದ್ರದಲ್ಲಿ ಮಕ್ಕಳಿಗೆ ಹಾಲು, ಮೊಟ್ಟೆ, ಬಾಳೆಹಣ್ಣು, ಹೆಸರು ಬೆಳೆ ಪಾಯಸ, ರಾಗಿ ಗಂಜಿ, ಉಪ್ಪಿಟ್ಟು ಸೇವನೆ ಮಾಡುತ್ತಿರುವದರಿಂದ ಮಕ್ಕಳಲ್ಲಿ ಅಪೌಷ್ಠಿಕ ಕೊರತೆ ನಿಗಿಸುತ್ತದೆ ಎಂಬ ಮಾಹಿತಿ ನೀಡಿದರು.

ಪ್ರತಿ ತಿಂಗಳಿಗೊಮ್ಮೆ ಕೂಸಿನ ಮನೆಯ ಮಕ್ಕಳ ಆರೋಗ್ಯ ತಪಾಸಣೆ ಜರುಗಿಸಿ ಅವರ ಬೆಳವಣಿಗೆ, ತೂಕ ಇತ್ಯಾದಿ ಮಾಹಿತಿಯನ್ನು ರಜಿಸ್ಟರ್‌ನಲ್ಲಿ ದಾಖಲಿಸುತ್ತಿರುವದರಿಂದ ಪ್ರತಿ ಮಗುವಿನ ಆರೋಗ್ಯದ ಖಚಿತಪಡಿಸಿಕೊಳ್ಳಲು ಅನುಕೂಲವಾಗುತ್ತಿರುವ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿ ವಿವರಿಸಿದರು. ಸಂಶೋಧನಾ ತಂಡವು ಹಲಗೇರಿ ಕೂಸಿನ ಮನೆ ಕಾರ್ಯನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಯಲ್ಲಪ್ಪ ಓಜನಹಳ್ಳಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಅಶೋಕ ರಾಂಪುರ, ಕಾರ್ಯದರ್ಶಿ ದೊಡ್ಡನಗೌಡ ಪಾಟೀಲ್, ಗ್ರಾಮ ಪಂಚಾಯತ ಸದಸ್ಯರಾದ ಕಳಕನಗೌಡ ಹಳೆಮನಿ, ಮಕ್ಕಳ ಆರೈಕೆದಾರರಾದ ಭರಮವ್ವ ಹರಿಜನ, ಅನ್ನಪೂರ್ಣ ಸಂಜಿವಗೌಡ್ರ, ಡಿಇಒ ಪಂಚಾಕ್ಷರಿ, ಮಾಲತೇಶ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು