Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಾಳೆಯ ಫಲಿತಾಂಶಕ್ಕೆ ಎಲ್ಲಿಲ್ಲದ ಕಾತರ !

 

ಬೆಳಗಾವಿ :
ಕರುನಾಡಿನ ಅತ್ಯಂತ ನಿರ್ಣಾಯಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರ ಬೀಳಲಿದೆ. ಹೀಗಾಗಿ ಎಲ್ಲರೂ ಈ ಕ್ಷಣಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ತಮ್ಮ ಮತಕ್ಷೇತ್ರದ ಹೊಸ ಶಾಸಕರು ಯಾರಾಗಬಹುದು ಎಂಬ ಕಾತರ ಎಲ್ಲರನ್ನೂ ಕಾಡುತ್ತಿದೆ. ಆದ್ದರಿಂದ ಎಲ್ಲರ ಚಿತ್ತ ಇದೀಗ ಶನಿವಾರದ ಫಲಿತಾಂಶದತ್ತ ನೆಟ್ಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳಿವೆ. ಬಿಜೆಪಿ ಇವುಗಳಲ್ಲಿ 13 ಕ್ಷೇತ್ರಗಳಲ್ಲಿ ಶಾಸಕರನ್ನು ಹೊಂದಿದೆ. ಆದರೆ ಸದ್ಯದ ಬೆಳವಣಿಗೆಯಲ್ಲಿ ಇಷ್ಟು ಸ್ಥಾನಗಳನ್ನು ಮತ್ತೆ ಉಳಿಸಿಕೊಂಡರೆ ಆದೊಂದು ಆ ಪಕ್ಷದ ಪಾಲಿಗೆ ದೊಡ್ಡ ಸಾಧನೆ ಆಗಲಿದೆ. ಬಿಜೆಪಿ ಈ ಸಲ ತುಸು ಹಿನ್ನೆಡೆ ಅನುಭವಿಸುವ ಸಾಧ್ಯತೆ ಗೋಚರಿಸಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಫಲಿತಾಂಶ ಬಿಜೆಪಿ ಪಾಲಿಗೆ ಏನಾಗಲಿದೆಯೋ ನೋಡಬೇಕಿದೆ. ಪ್ರಧಾನ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಬಿಜೆಪಿಯ ಭದ್ರಕೋಟೆಗೆ ಲಗ್ಗೆ ಇಡಲು ಮುಂದಾಗಿದೆ.

ಇನ್ನೊಂದೆಡೆ ರಾಜ್ಯ ರಾಜಕೀಯದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ ಎಂದು ಹಲವು ಸಮೀಕ್ಷೆಗಳು ನುಡಿದಿವೆ. ಹೆಚ್ಚಿನ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಭವಿಷ್ಯ ನುಡಿದಿವೆ. ಆದರೆ ಬಿಜೆಪಿ ಮಾತ್ರ ಈ ಬಗ್ಗೆ ಯಾವುದೇ ತಲೆಕೆಡಿಸಿಕೊಂಡಿಲ್ಲ. ಈ ಬಾರಿಯೂ ಬಿಜೆಪಿಯ ಕಮಲ ಮತ್ತೆ ಅರಳಲಿದೆ ಎಂಬ ಆಶಾಭಾವ ನಾಯಕರಲ್ಲಿ ಇದೆ. ಕಾರ್ಯಕರ್ತರು ಮಾತ್ರ ಸಮೀಕ್ಷೆಯಿಂದ ಕಳವಳಗೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಉತ್ಸಾಹ ಕಂಡುಬಂದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಬಗ್ಗೆ ಸಮೀಕ್ಷೆಗಳು ನುಡಿದಿದ್ದು ಒಟ್ಟಾರೆ ಇದೀಗ ಶನಿವಾರದ ಮತ ಎಣಿಕೆಯತ್ತ ಹರಿದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ