E-PAPER
17 Nov 2026, 05:23:53 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಸುದ್ದಿ ಗೋಷ್ಠಿ

ಬೆಳಗಾವಿ-02: ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಕೇಂದ್ರದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ವಿಪಕ್ಷಗಳು ಮಾಡುತ್ತಿರುವ ಟೀಕೆಯನ್ನು ಖಂಡಿಸಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದಲ್ಲಿ ಸೋಲನುಭವಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಮಸಿ ಬಳಿಯಲು ನಿರರ್ಥಕ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.
ಮತದಾರರ ಪಟ್ಟಿಯಿಂದ ಮೃತರು ಹಾಗೂ ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕುವ ಸಾಮಾನ್ಯ ಪ್ರಕ್ರಿಯೆಯನ್ನೂ ರಾಹುಲ್ ಗಾಂಧಿ ‘ವೋಟ್ ಚೋರಿ’ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು. ನಿಜವಾಗಿಯೂ ಮತಕಳ್ಳತನ ನಡೆದಿದ್ದರೆ ವಿಪಕ್ಷಗಳು ನ್ಯಾಯಾಲಯದ ಮೆಟ್ಟಿಲೇರಲು ಏಕೆ ಹಿಂದೇಟು ಹಾಕುತ್ತಿವೆ ಎಂದು ಪ್ರಶ್ನಿಸಿದ ಅವರು, ಈ ವಿಚಾರದಲ್ಲಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧವೂ ಶೆಟ್ಟರ್ ವಾಗ್ದಾಳಿ ನಡೆಸಿದರು. ರಾಜ್ಯದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ಆರೋಪಿಸಿದ ಅವರು, ಗ್ಯಾರಂಟಿ ಯೋಜನೆಗಳ ಭರಾಟೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು. ಗುತ್ತಿಗೆದಾರರಿಗೆ ಸುಮಾರು ₹38 ಸಾವಿರ ಕೋಟಿ ಬಿಲ್ ಬಾಕಿ ಉಳಿದಿದೆ ಎಂದು ಹೇಳಿದ ಅವರು, ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಡ್ಡೆ ತೋರುತ್ತಿದ್ದಾರೆ ಎಂದು ಟೀಕಿಸಿದರು.
ಯಡಿಯೂರಪ್ಪ ಅವರ ಮೇಲೆ ಹೊಣೆ ಹೊರಿಸುವ ನಡವಳಿಕೆಯನ್ನು ಡಿ.ಕೆ. ಶಿವಕುಮಾರ್ ಬಿಡಬೇಕು ಎಂದು ಶೆಟ್ಟರ್ ಎಚ್ಚರಿಸಿದರು.
ವೀರಶೈವ ಮಠಾಧೀಶರ ಕುರಿತು ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗಳನ್ನೂ ಟೀಕಿಸಿದ ಶೆಟ್ಟರ್, ಇಂತಹ ವ್ಯಂಗ್ಯದ ಮಾತುಗಳು ಅವರ ದುರಹಂಕಾರವನ್ನು ತೋರಿಸುತ್ತವೆ ಎಂದು ಹೇಳಿದರು. ಅಧಿಕಾರದ ಅಮಲು ನೆತ್ತಿಗೇರಿರುವುದರಿಂದಲೇ ಮಠಗಳು ಹಾಗೂ ಸ್ವಾಮೀಜಿಗಳ ಕುರಿತು ಅವಹೇಳನಕಾರಿ ಹೇಳಿಕೆಗಳು ಬರುತ್ತಿವೆ ಎಂದು ಆರೋಪಿಸಿದ ಅವರು, ಕೂಡಲೇ ಗುರು ಅಜ್ಜಯ್ಯನವರ ಬಳಿ ತೆರಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಿಸಲು ಮುಂದಾಗಿರುವುದನ್ನು ವಿರೋಧಿಸಿದ ಅವರು, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಧರ್ಮಗಳ ನಡುವೆ ಒಡಕು ಮೂಡಿಸುವ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಪಾಟೀಲ್, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ್, ಮಹಾಂತೇಶ ಕವಟಗಿಮಠ ಸೇರಿದಂತೆ ಇತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ