ಮಾಚಿದೇವ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಪವರ್ಗ 2ಎ ಅಡಿ ಬರುವ ಮಡಿವಾಳ ಹಾಗೂ ಅದರ ಉಪಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದಲ್ಲಿನ ಸ್ವಾತಂತ್ರö್ಯ ಅಮೃತ ಮಹೋತ್ಸವ ಮನ್ನಡೆ ಯೋಜನೆ ವೆಬ್ ಸೈಟ್ https://www.kaushalkar.com/ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಯೋಜನೆಗಳ ಮಾರ್ಗಸೂಚಿ, ಅಗತ್ಯ ಇರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯ ಮಿತಿ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kmmd.karnataka.gov.in ಸಂಪರ್ಕಿಸಬಹುದು. ನಿಗಮದ ದೂರವಾಣಿ ಸಂಖ್ಯೆ 080-22374832, 8050770004, 8050770005 ಕರೆ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.