LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೂಹಕ್ಕಿನ ಸಮಸ್ಯೆ ನಿವಾರಣೆಗೆ ಟಾಸ್ಕ್ ಫೋರ್ಸ್: ಮಧು ಬಂಗಾರಪ್ಪ

ಬೆಂಗಳೂರು,ಅ.30 :ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ. ಎಸ್. ಅಕಾರಿ ನೇತೃತ್ವದಲ್ಲಿ ಟಾಸ್ಕ್-ರ್ಸ್ ರಚನೆಯಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತು ವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.

ಶರಾವರಿ ಯೋಜನೆ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

1978  ಇಸವಿಗಿಂತ ಮೊದಲು ಸಾಗುವಳಿ ಮಾಡುತ್ತಿದ್ದ ರೈತರಿಗೆ 3 ಎಕರೆ ಭೂಮಿ ಸಕ್ರಮಗೊಳಿಸಬೇಕು. ಈ ವಿಷಯದಲ್ಲಿ ಕೈಬಿಟ್ಟಿರುವ ಪ್ರಕರಣಗಳನ್ನು ಪರಿಗಣಿಸಬೇಕು ಎಂದು ಸಚಿವರು ಹೇಳಿದರು.
ವಿವಿಧ ಭೂಮಿ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಅಸೂಚಿತ ಅರಣ್ಯ ಪ್ರದೇಶದಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ ಭೂಮಿಗಳನ್ನು ಅರಣ್ಯ ಭೂಮಿ ಎಂದು ಇಂಡೀಕರಣ ಮಾಡುತ್ತಿರುವುದರಿಂದ ಆಗಿರುವ ಸಮಸ್ಯೆಗಳ ಬಗ್ಗೆ ಸಚಿವರು ಅಕಾರಿಗಳಿಗೆ ಮನವರಿಕೆ ಮಾಡಿದರು.

ಅರಣ್ಯಭೂಮಿ ಒತ್ತುವರಿಗೆ ಸಂಬಂಸಿದಂತೆ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ 2011 ರ ವಿಶೇಷ ನ್ಯಾಯಾಲಯದಲ್ಲಿ ಹಾಗೂ ಉಪ ಅರಣ್ಯ ಸಂರಕ್ಷಣಾಕಾರಿಗಳ ನ್ಯಾಯಾಲಯದಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸುವ ಮೂಲಕ ರೈತರಿಗೆ ತೊಂದರೆಕೊಡಲಾಗುತ್ತಿದೆ ಎಂಬುದನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಕರ್ನಾಟಕ ಅರಣ್ಯ ಕಾಯ್ದೆ-1963 ರ ಸೆಕ್ಷನ್ ೦೪ರ ಅಡಿಯಲ್ಲಿ ಮೀಸಲು ಅರಣ್ಯ ಪ್ರಾಥಮಿಕ ಅಸೂಚನೆಯಿಂದ ರೈತರ ಹಿಡುವಳಿ ಭೂಮಿ, ಬಗರ್ ಹುಕುಂ ಭೂಮಿ ಹಾಗೂ ಜನವಸತಿ ಪ್ರದೇಶಗಳನ್ನು ಕೈಬಿಟ್ಟು ಸೆಕ್ಷನ್ 17 ರ ಅಡಿಯಲ್ಲಿ ಅಂತಿಮ ಅಸೂಚನೆ ಹೊರಡಿಸಿ,  ಭೂಮಿ ಹಾಗೂ ವಸತಿ ಹಕ್ಕನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸುಪ್ರೀಂಕೋರ್ಟ್‌ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಸಿದಂತೆ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಇದನ್ನು ತ್ವರತಿವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿವಿಧ ಇಲಾಖೆ ಉನ್ನತ ಅಕಾರಿಗಳು, ರೈತ ಮುಖಂಡರಾದ ಸಾಗರ ಜಯಂತ್, ತಿ.ನ. ಶ್ರೀ ನಿವಾಸ್, ಶ್ರೀಕರ್, ಬಿ.ಎ.  ರಮೇಶ್ ಹೆಗಡೆ, ದಿನೇಶ್ ಶಿರವಾಳ, ಧರ್ಮಪ್ಪ, ದುಗೂರು ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST