LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

ಕೊಡಗು : ಮಡಿಕೇರಿ ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ ​ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್‌ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ.

ಇನ್ನು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಹಿತಿ ನೀಡಿದ್ದು, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್​​ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಯೋಜನೆಯ ಅಪಾಯಗಳ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತದಿಂದ ಯೋಜನೆ ರದ್ದು ಮಾಡಲಾಗಿದೆ.

ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆಯುವ ಮೊದಲು ಅಲ್ಲಿಗೆ ಭೂ ವಿಜ್ಞಾನಿಗಳನ್ನ, ಪರಿಸರ ಇಲಾಖೆ ತಜ್ಞರನ್ನ ಕರೆಸಿ ವಿವಿಧ ಪರೀಕ್ಷೆಗಳನ್ನು ಮಾಡಬೇಕಿತ್ತು. ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಲು ಈ ಜಾಗ ಸುರಕ್ಷಿತವಾಗಿದೆ ಎಂಬ ಫೀಸಿಬಿಲಿಟಿ ಚೆಕ್ ಮಾಡಬೇಕಿತ್ತು. ಆದರೆ ಯಾವುದನ್ನೂ ಮಾಡದೆ ತೋಟಗಾರಿಕಾ ಇಲಾಖೆ ಟೆಂಡರ್​ ಆಹ್ವಾನಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಈಗಲೇ ರಾಜಾಸೀಟ್​ನಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರ ಒತ್ತಡ ತಾಳಲಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಗ್ಲಾಸ್ ಬ್ರಿಡ್ಜ್ ಮಾಡಿದರೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನದಿಂದ ಪ್ರಕೃತಿಯ ಮೇಲೆ ಇನ್ನಷ್ಟು ಒತ್ತಡ ಬೀಳಲಿದೆ ಎಂಬ ಮಾತು ಕೇಳಿಬಂದಿತ್ತು. ಅದೂ ಅಲ್ಲದೆ ಗುಡ್ಡ ಕೊರೆದು ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಿದರೆ ಭೂ ಕುಸಿತವಾಗಿ ಪ್ರವಾಸಿಗರ ಜೀವಕ್ಕೂ ಕುತ್ತು ಬರಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026