ಪನಾಮ ದೇಶದಲ್ಲಿ ಮಂಗಳವಾರ ಮುಂಜಾನೆ 6.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ಬೆಳಿಗ್ಗೆ 4:50 ರ ಸುಮಾರಿಗೆ ಸಂಭವಿಸಿದ ಈ ಭೂಕಂಪನದ ಕೇಂದ್ರಬಿಂದುವು 7.683 ಡಿಗ್ರ ಉತ್ತರ ಅಕ್ಷಾಂಶ ಹಾಗೂ 81.405 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿ ದಾಖಲಾಗಿದೆ. ಭೂಮಿಯ ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಭೂಕಂಪ ಸಂಭವಿಸಿರುವುದಾಗಿ ಎನ್‌ಸಿಎಸ್ ತನ್ನ ಅಧಿಕೃತ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ತಿಳಿಸಿದೆ.