Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಜಗತ್ತಿಗೆ ರಾಮಾಯಣದ ಬೆಳಕು ನೀಡಿದ ಮಹರ್ಷಿ ವಾಲ್ಮೀಕಿ-ಶರಣಗೌಡ 




ತಾಳಿಕೋಟೆ, ಇಡೀ ಮನುಕುಲ ಸನ್ಮಾರ್ಗದಲ್ಲಿ ನಡೆಯುವಂತಾಗಲು ಮಹರ್ಷಿ ವಾಲ್ಮೀಕಿ ಅವರು ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ನೀಡಿದ್ದಾರೆ. ಈ ಮೂಲಕ ಅವರು ಇತಿಹಾಸದಲ್ಲಿ ಸದಾ ಸ್ಮರಣೀಯರಾಗಿದ್ದಾರೆ ಎಂದು ವಾಲ್ಮೀಕಿ ಸಮಾಜದ ಮುಖಂಡ ಶರಣಗೌಡ ಪೊಲೀಸ್ ಪಾಟೀಲ ಹೇಳಿದರು.
       ಸೋಮವಾರ ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ತಾಳಿಕೋಟೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇವಲ ಜಯಂತಿಗಳನ್ನು ಆಚರಿಸಿದರೆ ಸಾಲದು, ಮಹಾತ್ಮರ ಜೀವನದ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಬಾಂಧವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ನೀಡಬೇಕು. ಶಿಕ್ಷಣದಿಂದಲೇ ಸಮಾಜದ ಸರ್ವಾಂಗೀಣ ಪ್ರಗತಿ ಸಾಧ್ಯ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು. ವಾಲ್ಮೀಕಿ ಸಮಾಜವು ಇಂದಿಗೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮಾಜಕ್ಕೆ ದೊರೆಯಬೇಕಾದ ಮೀಸಲಾತಿ ಸೌಲಭ್ಯಗಳನ್ನು ಕೆಲವರು ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಪಡೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಅಕ್ರಮಗಳನ್ನು ತಡೆಗಟ್ಟಲು ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಮಾಜದ ಬಾಂಧವರು ಒಗ್ಗಟ್ಟನ್ನು ಕಾಪಾಡಿಕೊಂಡು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಅವರು ತಿಳಿಸಿದರು.
        ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ. ದಮ್ಮೂರಮಠ ಹಾಗೂ ನ್ಯಾಯವಾದಿ ಪ್ರಭಾಕರ ಗುಡಗುಂಟಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಹಾಗೂ ಸಂದೇಶಗಳು ಸಮಾಜಕ್ಕೆ ಸದಾ ಪ್ರೇರಣೆಯಾಗಿವೆ ಎಂದರು. 
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
      ಕಾರ್ಯಕ್ರಮದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
      ತಹಸೀಲ್ದಾರ್ ಎಂ.ಎಸ್. ಅರಕೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
          ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ಸುನೀಲ ಪಾಟೀಲ, ಪಿಎಸ್‌ಐ ಜ್ಯೋತಿ ಖೋತ್, ಸಮಾಜ ಕಲ್ಯಾಣ ಇಲಾಖೆಯ ಶಿವಲಿಂಗ ಹಚಡದ, ಕೃಷಿ ಅಧಿಕಾರಿ ಮಹೇಶ ಜೋಶಿ, ಆಡಳಿತ ವೈದ್ಯಾಧಿಕಾರಿ ಡಾ. ಎ.ಜಿ. ಬಿರಾದಾರ, ವಾಲ್ಮೀಕಿ ಸಮಾಜದ ಪ್ರಮುಖರಾದ ದಂಡಪ್ಪ ಬಾಗೇವಾಡಿ, ಕಾಶಿನಾಥ ಪಾಟೀಲ, ಬಸವರಾಜ ದೇವದುರ್ಗ, ಹಣಮಂತ ಮೇಲಿನಮನಿ, ಜಗದೀಶ ಪಾಟೀಲ, ಯಮನಪ್ಪ ಬರದೆನಾಳ, ಶ್ರೀಕಾಂತ ಕೊಡೆಕಲ್ಲ, ಮಲ್ಲು ಬಶಟ್ಟಿಹಾಳ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಎಸ್.ಎನ್. ಮಲ್ಲಾಡೆ, ಎಸ್.ಎಂ. ಕಲಬುರ್ಗಿ, ಮಹಾಂತೇಶ ತಾಳಿಕೋಟಿ, ರೇಣುಕಾ ಪಾಟೀಲ, ಮಂಜುನಾಥ ನರಸಣಗಿ, ನವೀನ್ ಇಜೇರಿ, ರಾಮನಗೌಡ ಭಂಟನೂರ, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
    ನಿಲಯ ಪಾಲಕ ಎನ್.ವಿ. ಕೋರಿ ಸ್ವಾಗತಿಸಿದರು. ಸಿ.ಆರ್.ಸಿ. ರಾಜು ವಿಜಾಪುರ ನಿರೂಪಿಸಿದರು. ಶಿಕ್ಷಕ ವ್ಹಿ.ಬಿ. ನಾಯ್ಕೋಡಿ ವಂದಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ