Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಮಹರ್ಷಿ ವಾಲ್ಮೀಕಿಯವರ ಆದರ್ಶಗಳೇ ಸಮುದಾಯಕ್ಕೆ ಸ್ಫೂರ್ತಿ: ಶಾಸಕ ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಅಪಾರಜ್ಞಾನ ಸಂಪತ್ತು ಹೊಂದಿದ್ದ ಮಹರ್ಷಿ ವಾಲ್ಮೀಕಿಯವರು ಸುಮಾರು ೨೪ ಸಾವಿರ ಸಂಸ್ಕೃತ ಶ್ಲೋಕಗಳನ್ನು ರಾಮಾಯಣವಾಗಿ ಪರಿವರ್ತನೆ ಮಾಡಿದಂತಹ ಮಹಾನ್ ಚೇತನ. ನಾಡಿನ ವಾಲ್ಮೀಕಿ ಸಮುದಾಯದ ಸದಾಕಾಲ ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳ ಪರಿಪಾಲನೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಹಾನ್‌ಶಕ್ತಿಗೆ ಗೌರವಸಮರ್ಪಣೆ ಮಾಡಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಗುರುವಾರ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮುದಾಯದ ಮುಖಂಡರು ಹಮ್ಮಿಕೊಂಡಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಾವಿರಾರು ವರ್ಷಗಳ ಹಿಂದೆಯೇ ಮಾನವೀಯ ಮೌಲ್ಯ, ಸಮಾನತೆ, ಸೌಹಾರ್ಧತೆಯ ಬಗ್ಗೆ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಮಹರ್ಷಿ ವಾಲ್ಮೀಕಿಯವರು ಸಮಸ್ತ ಮಾನವ ಸಮಾಜಕ್ಕೆ ಆದರ್ಶಪ್ರಾಯರು. ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್ ಪಾಷ, ಇಂದು ನಾವೆಲ್ಲರೂ ಮಗರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಮೂಲಕ ಅವರು ನಾಡಿಗೆ ಸಲ್ಲಿಸಿದ ಸೇವೆಗಳನ್ನು ಸ್ಮರಿಸುವ ಕಾರ್ಯ ಮಾಡಲಾಗುತ್ತಿದೆ.

ಸರ್ಕಾರ ವಾಲ್ಮೀಕಿಯವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯಶಸ್ವಿಹೆಜ್ಜೆ ಇಟ್ಟಿದೆ. ಪ್ರಸ್ತುತ ವರ್ಷ ವಾಲ್ಮೀಕಿ ಸಮುದಾಯದಲ್ಲಿ ತಮ್ಮ ಸೇವಾಕಾರ್ಯದ ಮೂಲಕ ಗುರುತಿಸಿಕೊಂಡ ಐವರಿಗೆಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.

ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸವಿಭಾಗದ ಸಹಪ್ರಾಧ್ಯಾಪಕಿ ಡಾ.ಜಯಮ್ಮ, ಮಹರ್ಷಿ ವಾಲ್ಮೀಕಿಯವರ ಬದುಕನ್ನು ಅರ್ಥಗರ್ಭಿತವಾಗಿ ವಿವರಿಸಿದರು.

ವಾಲ್ಮೀಕಿ ಕಲ್ಯಾಣಮಂಟಪ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ಮಲ್ಲಪ್ಪನಾಯಕ, ಕಾರ್ಯದರ್ಶಿ ದುಗ್ಗಾವರ ತಿಪ್ಪೇಸ್ವಾಮಿ, ಚನ್ನಂಗಿರಂಗಸ್ವಾಮಿ, ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಬಾಳೆಮಂಡಿರಾಮದಾಸ್, ಡಾ.ನಾಗೇಂದ್ರನಾಯಕ, ನಗರಸಭಾ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯ ಎಸ್.ಜಯಣ್ಣ, ವೆಂಕಟೇಶ್, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಸುಮಭರಮಣ್ಣ, ಸಿ.ಶ್ರೀನಿವಾಸ್, ಸಿ.ಟಿ.ವೀರೇಶ್,

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಸಿ.ನಾಗರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜು, ಪೌರಾಯುಕ್ತ ಜಗರೆಡ್ಡ್ಪಿ, ಇಒ ಶಶಿಧರ, ಮಹಿಳಾ ಸಂಘದ ಅಧ್ಯಕ್ಷೆ ಯಶೋಧಮ್ಮ, ಕಾರ್ಯದರ್ಶಿ ಸೂರ್ಯಪ್ರಭಾ, ಎಲ್‌ಐಸಿತಿಪ್ಪೇಸ್ವಾಮಿ, ಸೌಭಾಗ್ಯಮ್ಮ, ಬಿಇಒ ಕೆ.ಎಸ್.ಸುರೇಶ್, ಸೂರನಾಯಕಜೆ.ರಘುವೀರನಾಯಕ, ಸಿ.ಟಿ.ಶ್ರೀನಿವಾಸ್, ಡಾ.ಲೋಕೇಶ್, ಸಿ.ಗುರುಸ್ವಾಮಿ, ಸಂದೀಪನಾಯಕ, ಪಿ.ತಿಪ್ಪೇಸ್ವಾಮಿ, ಬಡಗಿಪಾಪಣ್ಣ, ಡಾ.ಜಿತಿಪ್ಪೇಸ್ವಾಮಿ, ಡಾ.ಲೋಕೇಶ್, ಟಿ.ಜೆ.ತಿಪ್ಪೇಸ್ವಾಮಿ, ಗಾಡಿತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ