LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲದ ವೇಳೆ ರಸ್ತೆಗಳು ಜಲಾವೃತವಾಗುವುದನ್ನು ತಪ್ಪಿಸಿ: ಮಹೇಶ್ವರ್ ರಾವ್

ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ರಸ್ತೆಗಳಲ್ಲಿ ಜಲಾವೃತ ಆಗುವುದನ್ನು ತಪ್ಪಿಸುವಂತೆ *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ವಿವಿಧ ವಿಷಯಗಳ ಸಮಸ್ಯೆ ಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆಗಾಲದ ವೇಳೆ ಹೊರ ವರ್ತುಲ ರಸ್ತೆಗಳಲ್ಲಿ ಎಲ್ಲೆಲ್ಲಿ ಜಲಾವೃತವಾಗುತ್ತದೆಯೋ ಆ ಸ್ಥಳಗಳಲ್ಲಿ ಕೂಡಲೆ ಜಲಾವೃತವಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.

ನಗರದಲ್ಲಿ ಪ್ರಮುಖವಾಗಿ ಹೆಬ್ಬಾಳ ಜಂಕ್ಷನ್, ನಾಗವಾರ ಜಂಕ್ಷನ್, ವಿದ್ಯಾಶಿಲ್ಪ ಜಂಕ್ಷನ್, ರೂಪೇನ ಅಗ್ರಹಾರ, ಮಾರತಹಳ್ಳಿ ಪೊಲೀಸ್ ಠಾಣೆ, ಕಾರ್ತಿಕ್ ನಗರ, ಕಸ್ತೂರಿ ನಗರ ಮೇಲ್ಸೇತುವೆ, ಪ್ಯಾಲೆಸ್ ಗುಟ್ಟಹಳ್ಳಿ, ಪಣತ್ತೂರು ರೈಲ್ವೆ ಕೆಳಸೇತುವೆ, ನಾಯಂಡಹಳ್ಳಿ ಜಂಕ್ಷನ್, ಆರ್.ಆರ್ ನಗರ ಆರ್ಚ್, ಸುಮ್ಮನಹಳ್ಳಿ ಜಂಕ್ಷನ್ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಜಲಾವೃತವಾಗಲಿದ್ದು, ಅಲ್ಲಿ ಕೂಡಲೆ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ ಮೆಟ್ರೋ ವಿಭಾಗದ ಜೊತೆ ಸಮನ್ವಯ ಸಾಧಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಬೇಕು. ರಸ್ತೆ ಬದಿಯ ಸೈಡ್ ಡ್ರೈನ್ ಗಳಲ್ಲಿ ಹೂಳನ್ನು ತೆಗೆದು ಸ್ವಚ್ಛಗೊಳಿಸಬೇಕು. ರಸ್ತೆಗಳ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಸೂಚಿಸಿದರು.

*ರಸ್ತೆ ಗುಂಡಿಗಳನ್ನು ಮುಚ್ಚಿ:*

ನಗರದ ಹೊರ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರ ವಿಭಾಗದಿಂದ ರಸ್ತೆಗುಂಡಿಗಳ ಪಟ್ಟಿಯನ್ನು ನೀಡಿದ್ದು, ಆ ಪಟ್ಟಿಯ ಅನುಸಾರ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಇದರಿಂದ ವಾಹನಗಳ ಸಂಚಾರಕ್ಕೆ ಹೆಚ್ಚು ಅನುಕೂಲವಾಗಲಿದ್ದು, ಸಂಚಾರ ದಟ್ಟಣೆ ಆಗುವುದನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ, ಮುನಿಷ್ ಮೌದ್ಗೀಲ್, ಕರೀಗೌಡ, ಸುರಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರಾದ ರಮೇಶ್, ರಮ್ಯಾ, ದಿಗ್ವಿಜಯ್ ಬೋಡ್ಕೆ, ಸ್ನೇಹಲ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ