Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ಪತ್ರಿಕಾಗೋಷ್ಠಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.1: ರಾಜ್ಯದ ಮಹಿಳೆಯರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು ಅವರಿಗೆ ಈ ಸಂದರ್ಭದಲ್ಲಿ ನಾವು ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೂಡ ಬೂತ್ ಮಟ್ಟದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.

ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಭೇಟಿ ಬಚಾವೋ ಭೇಟಿ ಎನ್ನುತ್ತಾ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್,ಕ್ಷ್ಯ ವಹಿಸಿದೆ.

ದೇಶದ ಹೆಮ್ಮೆಯ ಮಹಿಳಾ ಕುಸ್ತಿಪಟುಗಳು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಪ್ರಧಾನಮಂತ್ರಿಗಳು ಇದುವರೆಗೂ ಒಂದು ಬಾರಿಯೂ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳನ್ನು ಭೇಟಿ ಮಾಡುತ್ತಿಲ್ಲ. ಈ ಮಹಿಳಾ ಕುಸ್ತಿಪಟುಗಳನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿಲ್ಲ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಸಂಸದೆ ಮಿನಾಕ್ಷಿ ಲೇಖಿ, ಕೇಂದ್ರದ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಈ ಹೋರಾಟ ಕಣ್ಣಿಗೆ ಕಾಣುತ್ತಿಲ್ಲವೇ? ದೇಶದ ರಾಷ್ಟ್ರಪತಿ ಮಹಿಳೆಯಾಗಿದ್ದು, ಅವರನ್ನು ಸರ್ಕಾರ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.

ಭಾರತೀಯ ಕುಸ್ತಿ ಸಂಸ್ಥೆ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಸಂಸದರಾಗಿದ್ದು, ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪವಿದ್ದು, ಅವರ ರಕ್ಷಣೆಗೆ ಇಡೀ ಬಿಜೆಪಿ ಸರ್ಕಾರ ಮುಂದಾಗಿದೆ. ಈ ಪ್ರಕರಣದ ನಂತರ ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆ ಭಾರತವನ್ನು ನಿಷೇಧಿಸುವ ಎಚ್ಚರಿಕೆಯನ್ನು ನೀಡಿದೆ. ಆದರೂ ಬಿಜೆಪಿ ಸರ್ಕಾರ ಹಾಗೂ ಪ್ರಧಾನಮಂತ್ರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಮಹಿಳಾ ಕಾಂಗ್ರೆಸ್ ವತಿಯಿಂದ ನಮ್ಮ ಮಹಿಳಾ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತುತ್ತಿದ್ದು, ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಈ ವಿಚಾರವಾಗಿ ಧ್ವನಿ ಎತ್ತಲಾಗುವುದು. ಮಹಿಳಾ ಕುಸ್ತಿಪಟುಗಳ ಜತೆ ನಾವು ಇದ್ದೇವೆ ಎಂದು ಸಂದೇಶ ರವಾನಿಸಲಾಗುವುದು.

ಮಹಿಳಾ ಕುಸ್ತಿಪಟುಗಳ ಪರವಾಗಿ ಅನಿಲ್ ಕುಂಬ್ಳೆ ಸೇರಿದಂತೆ ಅನೇಕ ಕ್ರೀಡಾ ತಾರೆಯರು ಧ್ವನಿ ಎತ್ತುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರೂ ಪೊಲೀಸರ ಮೂಲಕ ಅವರ ಮೇಲೆ ದಬ್ಬಾಳಿಕೆ ಮಾಡಿ ಬಂಧಿಸಲಾಗಿದೆ. ಈ ಮಹಿಳಾ ವಿರೋಧಿ ಬಿಜೆಪಿ ಸರ್ಕಾರ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಜೈಲಿಗೆ ಕಳುಹಿಸುವ ಬದಲು, ಹೋರಾಟನಿರತ ಮಹಿಳಾ ಕುಸ್ತಿಪಟುಗಳನ್ನು ಬಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸುತ್ತೇವೆ.

ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಟ್ಟುಕೊಂಡು ನೂತನ ಸಂಸತ್ ಭವನ ಉದ್ಘಾಟನೆ ಮಾಡಿರುವುದು ದೇಶದ ಮಹಿಳಾ ಕುಲಕ್ಕೆ ಮಾಡಿರುವ ಅತಿದೊಡ್ಡ ಅಪಮಾನ. ಬಿಜೆಪಿ ನಾಯಕರು ಬಾಯಿ ಮಾತಿಗೆ ಭಾರತ ಮಾತಾಕಿ ಜೈ ಎಂದರೆ ಸಾಲದು. ನಮ್ಮ ದೇಶಕ್ಕೆ ಕೀರ್ತಿ ತಂದಿರುವ ಮಹಿಳೆಯರ ರಕ್ಷಣೆ ಮಾಡಬೇಕು. ಕೇಂದ್ರ ಸರ್ಕಾರ ಜೀವಂತವಾಗಿದ್ದರೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂಸದ ಸ್ಥಾನದಿಂದ ವಜಾಗೊಳಿಸಬೇಕು.

ಸರ್ಕಾರದ ಈ ದಬ್ಬಾಳಿಕೆಗೆ ಬೇಸತ್ತು ಮಹಿಳಾ ಕುಸ್ತಿಪಟುಗಳು ತಾವು ಗೆದ್ದಿರುವ ಪದಕಗಳನ್ನು ಗಂಗಾನದಿಗೆ ಎಸೆಯಲು ಮುಂದಾಗಿದ್ದಾರೆ. ಇದಕ್ಕಿಂತ ದೊಡ್ಡ ಅಪಮಾನ ಬೇರೆ ಇಲ್ಲ. ಈ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು.

ಮಾಜಿ ಸಚಿವೆ ರಾಣಿ ಸತೀಶ್:

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಾದ್ಯಂತ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿದೆ. ಈ ಕುಸ್ತಿಪಟುಗಳು ಪದಕ ಗೆದ್ದಾಗ ಅವರ ಜತೆ ಫೋಟೋ ತೆಗೆಸಿಕೊಂಡು ಪ್ರಧಾನಮಂತ್ರಿಗಳು ಪ್ರಚಾರ ಪಡೆಯುತ್ತಾರೆ. ಅದೇ ಕ್ರೀಡಾಪಟುಗಳು ದೌರ್ಜನ್ಯಕ್ಕೆ ಒಳಾಗಾಗಿರುವಾಗ ಅವರಿಗೆ ಸಾಂತ್ವಾನ ಹೇಳುವುದಿರಲಿ, ಈ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಕೂಡ ಮಾಡುತ್ತಿಲ್ಲ. ಇದು ದೇಶಕ್ಕೆ ಕಪ್ಪುಚುಕ್ಕೆಯಾಗಿದೆ. ಮೋದಿ ಅವರು ಮಹಿಳೆ ಹಾಗೂ ಮಕ್ಕಳ ವಿಚಾರವಾಗಿ ಮಾತನಾಡುತ್ತಾರೆ. ಆದರೆ ಇವರು ಪ್ರತಿಭಟನೆ ಆರಂಭಿಸಿ ನೂರು ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅವರು ಗೊಂದಲದಲ್ಲಿರುವುದಕ್ಕೆ ಸಾಕ್ಷಿ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಇಂತಹ ದೌರ್ಜನ್ಯ ನಡೆಯುತ್ತಿರುವುದು ಶೋಚನೀಯ ಪರಿಸ್ಥಿತಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ