LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಧನ ಸ್ವಾವಲಂಬನೆಗೆ ಆದ್ಯತೆ: ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಇಂಧನ ಕ್ಷೇತ್ರದ ಸ್ವಾವಲಂಬನೆಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಗೃಹ ಬಳಕೆದಾರರು, ರೈತರು ಹಾಗೂ ಹಸಿರು ಇಂಧನ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ.
ರಾಜ್ಯದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ ₹10,578 ಕೋಟಿ ಮೀಸಲಿರಿಸಲಾಗಿದೆ. ಜೊತೆಗೆ ರೈತರಿಗೆ ನೆರವಾಗುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಸಹಾಯಧನ ಯೋಜನೆಗೆ ₹19,290 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ಇಂಧನ ಸ್ವಾವಲಂಬನೆ ಸಾಧಿಸಲು ಸರ್ಕಾರ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಎಂಬ ಹೊಸ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಅಂದಾಜು ₹10,500 ಕೋಟಿ ವೆಚ್ಚದಲ್ಲಿ 3,000 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಆರಂಭಿಸಲು ಯೋಜಿಸಲಾಗಿದೆ.
ಇನ್ನೂ ವಿದ್ಯುತ್ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಅಂದಾಜು ₹3,400 ಕೋಟಿ ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿ ಸಬ್ ಸ್ಟೇಷನ್‌ಗಳಲ್ಲಿ 2,000 MWh ಸಾಮರ್ಥ್ಯದ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ (BESS) ಅಳವಡಿಕೆ ಯೋಜನೆ ಪ್ರಾರಂಭಿಸಲಾಗುತ್ತದೆ.
ಇದೇ ವೇಳೆ ವಿದ್ಯುತ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸಾರ್ವಜನಿಕ ಸ್ಥಳಗಳಲ್ಲಿ ₹777 ಕೋಟಿ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್–ಇ ಡ್ರೈವ್ ಯೋಜನೆ ಅಡಿಯಲ್ಲಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆ, ರೈತರ ನೆರವು ಹಾಗೂ ವಿದ್ಯುತ್ ವಾಹನಗಳ ಬಳಕೆ ಹೆಚ್ಚುವ ನಿರೀಕ್ಷೆಯಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು