Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

16 ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಮಹಾ ಪರಿಷ್ಕರಣೆ: ಚುನಾವಣಾ ಆಯೋಗದ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಸೂಚನೆ ನೀಡಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಈ ಪರಿಷ್ಕರಣೆ ಪ್ರಕ್ರಿಯೆ ಜಾರಿಯಾಗಲಿದೆ. ದುರ್ಗಮ ಭೌಗೋಳಿಕ ಪ್ರದೇಶಗಳು, ಪ್ರತಿಕೂಲ ಹವಾಮಾನ ಮತ್ತು ಕಾರ್ಯಾಚರಣಾ ಸವಾಲುಗಳ ಹಿನ್ನೆಲೆ ಈ ಮೂರು ಪ್ರದೇಶಗಳಲ್ಲಿ ಎಸ್‌ಐಆರ್‌ ಮುಂದೂಡಲಾಗಿದೆ. ಜನಗಣತಿಯ ಎರಡನೇ ಹಂತದ ಪ್ರಗತಿ ಹಾಗೂ ಸ್ಥಳೀಯ ಪರಿಸ್ಥಿತಿಗಳನ್ನು ಆಧರಿಸಿ ಪ್ರತ್ಯೇಕ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಆಯೋಗ ಸ್ಪಷ್ಟಪಡಿಸಿದೆ.

ಎಸ್‌ಐಆರ್‌ ಮೂರನೇ ಹಂತದ ಆರಂಭದ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಅರ್ಹ ನಾಗರಿಕರ ಹೆಸರಷ್ಟೇ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು ಹಾಗೂ ಅನರ್ಹ ದಾಖಲೆಗಳನ್ನು ತೆಗೆದುಹಾಕುವುದು ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಲಾಗಿದೆ.

ಎಸ್‌ಐಆರ್‌ ನಡೆಯಲಿರುವ ರಾಜ್ಯಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಹಾಗೂ ಉತ್ತರಾಖಂಡ ಸೇರಿವೆ. ಜೊತೆಗೆ ದೆಹಲಿ, ಚಂಡೀಗಢ ಮತ್ತು ದಾದ್ರಾ-ನಗರ ಹವೇಲಿ ಹಾಗೂ ದಮನ್-ದಿಯು ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಪರಿಷ್ಕರಣೆ ನಡೆಯಲಿದೆ.

ಜೂನ್ 20ರಿಂದ 29ರವರೆಗೆ ಅಧಿಕಾರಿಗಳಿಗೆ ತರಬೇತಿ ಹಾಗೂ ನಮೂನೆಗಳ ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ಹೊಸ ಹೆಸರು ಸೇರಿಸಲು ಅವಕಾಶ ನೀಡಲಾಗುತ್ತದೆ. ಅಂತಿಮ ಪರಿಷ್ಕೃತ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.

ದೇಶಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿಯ ಮನೆ ಪಟ್ಟಿ ಪ್ರಕ್ರಿಯೆಯೊಂದಿಗೇ ಎಸ್‌ಐಆರ್‌ ಹಂತವನ್ನು ಜೋಡಿಸಲಾಗಿದೆ. ಇದರಿಂದ ಆಡಳಿತ ಯಂತ್ರಕ್ಕೆ ಹೆಚ್ಚು ನಿಖರ ಮಾಹಿತಿಯನ್ನು ಸಂಗ್ರಹಿಸಲು ನೆರವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಪರಿಷ್ಕರಣೆ ಹಂತದಲ್ಲಿ ದೇಶಾದ್ಯಂತ ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಅವರಿಗೆ ಸಹಕಾರ ನೀಡಲು ವಿವಿಧ ರಾಜಕೀಯ ಪಕ್ಷಗಳಿಂದ 3.42 ಲಕ್ಷ ಬೂತ್ ಮಟ್ಟದ ಏಜೆಂಟರನ್ನು ನಿಯೋಜಿಸಲು ಸಿದ್ಧತೆ ನಡೆದಿದೆ. ಸಾರ್ವಜನಿಕರು ತಮ್ಮ ವಿವರಗಳನ್ನು ನಿಖರವಾಗಿ ನಮೂದಿಸಲು ಹೊಸ ನಮೂನೆಗಳನ್ನು ಭರ್ತಿ ಮಾಡಬೇಕಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ