Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಭಿವೃದ್ಧಿ ಆಧಾರದಲ್ಲಿ ಬಿಜೆಪಿಗೆ ಬಹುಮತ:ಅಶ್ವತ್ಥನಾರಾಯಣ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.25: ಕೃಷಿ, ಮೂಲಸೌಕರ್ಯ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರ ಒತ್ತು ನೀಡಿರುವುದರಿಂದ ಜನರು ಬಿಜೆಪಿ ಪರವಾಗಿ ನಿಂತಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ವಾಸ ವ್ಯಕ್ತಪಡಿಸಿದರು.



ನಗರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸಲಾಗುತ್ತಿದೆ. ಡಿಜಿಟಲ್ ವ್ಯವಸ್ಥೆ, ಕೃತಕ ಬುದ್ಧಿಮತ್ತೆ, ಆವಿಷ್ಕಾರ ವಲಯಗಳು ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿವೆ. ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಭೂಕಂದಾಯ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ಕೈಗಾರಿಕೆಗಳಲ್ಲಿ ಕಾನೂನಿನಂತೆ ಜಮೀನು ಖರೀದಿಸಬಹುದಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿದೆ. ಪ್ರತಿಭೆ ಮತ್ತು ಕೌಶಲ್ಯಾಭಿವೃದ್ಧಿ ನೀತಿಯ ಪ್ರಮುಖ ಅಂಶಗಳಾಗಿವೆ ಎಂದು ವಿವರಿಸಿದರು.

ಕರ್ನಾಟಕವನ್ನು ಜ್ಞಾನಾಧಾರಿತ ಮತ್ತು ಆವಿಷ್ಕಾರದ ರಾಜ್ಯವನ್ನಾಗಿಸಲು ಡಬಲ್ ಇಂಜಿನ್ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಾಮಥ್ರ್ಯ ಹೆಚ್ಚಿಸಲಾಗಿದ್ದು, ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಇಡೀ ದೇಶದಲ್ಲೇ ಕರ್ನಾಟಕಕ್ಕೆ ಅಧಿಕ ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ ಎಂದು ಹೇಳಿದರು.

ಬೆಂಗಳೂರು ನಗರಕ್ಕೆ ನೀರಿನ ಕೊರತೆಯಾಗದಂತೆ ಇನ್ನೂ 735 ಎಂ.ಎಲ್.ಡಿ ನೀರು ಪೂರೈಕೆಯ ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ. ನಗರದ ಅಭಿವೃದ್ಧಿಗೆ ಬಿಬಿಎಂಪಿ ಕಾಯ್ದೆ ಜಾರಿಗೆ ತಂದಿದೆ. ಮೆಟ್ರೋ ರೈಲು ಜಾಲ ವಿಸ್ತರಣೆ, ವರ್ತುಲ ರಸ್ತೆಗಳ ನಿರ್ಮಾಣ ಎಲ್ಲ ವಾರ್ಡ್‍ಗಳಲ್ಲಿ ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಸಮಾಜಮುಖಿ, ಜನಪರ ಮತ್ತು ಅಭಿವೃದ್ಧಿಯ ಧ್ಯೇಯೋದ್ದೇಶಗಳೊಂದಿಗೆ ಬಿಜೆಪಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಸಾಮಾನ್ಯರಿಂದ ಹಿಡಿದು ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ವ್ಯಕ್ತಿಗಳಿಗೆ ಅವಕಾಶ ನೀಡಲಾಗಿದೆ. ವಿಶೇಷವೆಂದರೆ, 75 ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. ಬಿಜೆಪಿ ಮಹಾ ಸಂಪರ್ಕ ಅಭಿಯಾನ ಇಂದು ಯಶಸ್ವಿಯಾಗಿ ಆರಂಭವಾಗಿದೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮನೆ-ಮನೆಗೆ ಭೇಟಿ ಡಬಲ್ ಇಂಜಿನ್ ಸರ್ಕಾರದ ಸಾಧನೆ ಮತ್ತು ಯೋಜನೆಗಳನ್ನು ತಿಳಿಸುತ್ತಿದ್ದಾರೆ. ಈ ಬಾರಿ ಬಿಜೆಪಿ 150 ಸ್ಥಾನಗಳನ್ನು ಗೆದ್ದು, ಭಾರಿ ಬಹುಮತದೊಂದಿಗೆ ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಿದರು.

ಮಧ್ಯಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ಯು.ಡಿ.ಶರ್ಮಾ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ನಾಯಕತ್ವದಲ್ಲಿ ದೇಶದ ಮೂಲೆ, ಮೂಲೆಯೂ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ. ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅನ್ವರ್ಥನಾಮವಾಗಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಚಟುವಟಿಕೆಗಳನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್, ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ