LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಕಾಂಗ್ರೆಸ್ ವಿರುದ್ಧ ಕಠಿಣ ಜರುಗಿಸಿ

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.


ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.


ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ.


 ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಅಗ್ರಹಪಡಿಸಿದೆ.


ಅಷ್ಟೇ ಅಲ್ಲದೆ; ಜನತಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯು ಇದಾಗಿದ್ದು, ಕಾಂಗ್ರೆಸ್ ಚುನಾವಣಾ ಆಶಯವನ್ನೇ ಬುಡಮೇಲು ಮಾಡುತ್ತಿದೆ ಎಂಬ ಅಂಶವನ್ನು ಪಕ್ಷ ಆಯೋಗದ ಗಮನಕ್ಕೆ ತಂದಿದೆ.


ಅಲ್ಲದೆ, ಇಂತಹ ಭರವಸೆಗಳ ಮೂಲಕ ಕಾಂಗ್ರೆಸ್ ಕರ್ನಾಟಕ ಮತ್ತು ದೇಶದ ಆರ್ಥಿಕತೆ, ಬೊಕ್ಕಸಕ್ಕೆ ಹೊರಲಾರದ ಹೊರೆಯನ್ನು ಹೊರೆಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಆಯೋಗ ಅತ್ಯಂತ ಕಠಿಣ ಕ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ