LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

ಮಲೈ ಮಹದೇಶ್ವರ / ಚಾಮರಾಜನಗರ : ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು...

*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

*ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು...


*2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ.

*ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು.

*ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು.

*ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ