LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಇಡಿ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.

ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ ತಮಿಳು, ಮಲಯಾಳಂ ನಟರು ಹಾಗೂ ವಾಹನ ಮಾಲೀಕರು ಸೇರಿ 17 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಫೆಮಾ, 1999ರ ಅಡಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಸಿಂಡಿಕೇಟ್ ಅನ್ನು ಬಹಿರಂಗಪಡಿಸುವ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕಲಿ ದಾಖಲೆಗಳನ್ನು ಬಳಸಿ ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳ ವಾಹನ ನೋಂದಣಿ ಪಡೆದುಕೊಂಡು ಅಕ್ರಮವಾಗಿ ಸಿನಿಮಾ ನಟರಿಗೆ, ಉದ್ಯಮಿಗಳಿಗೆ ಕಾರು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೂಡ ಕೇಳಿಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026