ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ.!
ಕೊಲ್ಕತ್ತಾ: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಅನ್ಯಾಯವಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ. ನಾವು ಚುನಾವಣೆಯಲ್ಲಿ ಸೋತಿಲ್ಲ. ಮರು ಮತ ಎಣಿಕೆ ನಡೆಯಬೇಕು. ಅಲ್ಲಿಯವರೆಗೂ ನಾನೂ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೊಸ ಬಾಂಬ್ ಸಿಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.