Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಉಚಿತ ಪ್ರಯಾಣ : ಮಹಿಳೆಯರ ಉಪಾಯಕ್ಕೆ ನಿರ್ವಾಹಕರೇ ಸುಸ್ತು..!

 

ಬೆಂಗಳೂರು :
ರಾಜ್ಯದಲ್ಲಿ ಈಗ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ. ಕಾಂಗ್ರೆಸ್ ಸರಕಾರ ನೀಡಿದ ಭರವಸೆಯಂತೆ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಸಂಚರಿಸುವ ಅವಕಾಶ ಸಿಕ್ಕಿದೆ.
ಶಕ್ತಿ ಯೋಜನೆಯಡಿ ಸರ್ಕಾರ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ ಕಲ್ಪಿಸಿದ್ದು, ಬೇರೆ ರಾಜ್ಯಗಳ ಮಹಿಳೆಯರ ಉಪಾಯಕ್ಕೆ ಬಸ್‌ ಕಂಡಕ್ಷರ್‌ಗಳೇ ಬೆಚ್ಚಿಬಿದ್ದಿದ್ದಾರೆ.

ಸರ್ಕಾರದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಿಂದ ಬಿಎಂಟಿಸಿ ಸೇರಿದಂತೆ ಸಾಮಾನ್ಯ ಕೆಎಸ್‍ಆರ್‌ಟಿಸಿ ಬಸ್‍ಗಳಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

ಸ್ಮಾರ್ಟ್ ಕಾರ್ಡ್ ವಿತರಿಸದ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಸರ್ಕಾರದ ನೀಡಿರುವ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಮಹಿಳೆಯರು ಪ್ರಯಾಣಿಸಬಹುದಾಗಿದೆ. ಶಕ್ತಿ ಯೋಜನೆ ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯವಾಗಲಿದೆ.

ರಾಜ್ಯದ ನಿವಾಸಿಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ಶೂನ್ಯ ಟಿಕೆಟ್ ನೀಡುವಂತೆ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಬೆಂಗಳೂರಿನಲ್ಲಿ ನೆಲೆಸಿರುವ ಪಶ್ಚಿಮಬಂಗಾಳ ಮತ್ತು ತಮಿಳುನಾಡಿನ ಮಹಿಳೆಯರು ಕನ್ನಡದಲ್ಲಿ ನಕಲಿ ಆಧಾರ್ ಕಾರ್ಡ್‍ಗಳನ್ನು ಪ್ರಿಂಟ್ ಮಾಡಿಸಿಕೊಂಡು ಉಚಿತವಾಗಿ ಪ್ರಯಾಣಿಸುತ್ತಿದ್ದಾಗ ಕಂಡಕ್ಟರ್ ಒಬ್ಬರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಹಣ ಕೊಟ್ಟು ಪ್ರಯಾಣ ಮಾಡುವಂತೆ ತಾಕೀತು ಮಾಡಿದ್ದಾರೆ.

ಬಸ್‍ಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಪ್ರತಿಯೊಬ್ಬ ಮಹಿಳೆಯರ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಪರಿಶೀಲನೆ ಮಾಡದೇ ಬಿಟ್ಟರೆ ಕಂಡೆಕ್ಟರ್‌ ಅವರಿಗೆ ದಂಡದ ಭಯ ಬೇರೆ.
ಕೆಲ ಬೇರೆ ರಾಜ್ಯಗಳ ಮಹಿಳೆಯರು ವಿಶೇಷವಾಗಿ ಬೆಂಗಳೂರಿನಲ್ಲಿ ಈ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ವಾಸವಾಗಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಇತರೆ ರಾಜ್ಯಗಳ ಮಹಿಳೆಯರು ತಮ್ಮ ಮೂಲ ಆಧಾರ್‌ಕಾರ್ಡ್‌ ಪ್ರತಿಯಲ್ಲಿ ತಮ್ಮದೇ ರಾಜ್ಯದ ಅಧಿಕೃತ ಭಾಷೆಯ ಬದಲಾಗಿ ಕನ್ನಡದಲ್ಲಿ ಮುದ್ರಣವನ್ನು ಮಾಡಿಸಿಕೊಂಡಿದ್ದಾರೆ. ಮೂಲ ವಿಳಾಸ ಬಂಗಾಳ, ತಮಿಳುನಾಡಿನ ಗ್ರಾಮದ ವಿಳಾಸವನ್ನು ಹೊಂದಿದ್ದರೂ ಕೂಡ ಆ ಹೆಸರು ಮತ್ತು ವಿಳಾಸವನ್ನು ಕನ್ನಡದಲ್ಲಿ ಮುದ್ರಣ ಮಾಡಿಸಿಕೊಂಡಿದ್ದಾರೆ. ಇಂತಹ ದಾಖಲೆಗಳನ್ನು ಬಸ್‌ನಲ್ಲಿ ತೋರಿಸಿ ಪ್ರಯಾಣ ಮಾಡುತ್ತಿರುವುದು ಕಂಡಕ್ಟರ್‌ಗಳಿಗೆ ಪತ್ತೆಯಾಗಿದೆ. ಇಂತಹ ಆಧಾರ್ ಕಾರ್ಡ್ ತೋರಿಸಿದ ಇಬ್ಬರೂ ಮಹಿಳೆಯರು, ಕಂಡಕ್ಟರ್‌ ಬಳಿ ಸಿಕ್ಕಿಕೊಂಡಿದ್ದಾರೆ. ಈ ಬಗ್ಗೆ ಫೊಟೋಗಳನ್ನು ತೆಗೆದುಕೊಂಡು ಸಾರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಕಂಡಕ್ಟರ್‌ಗಳು ಎಚ್ಚೆತ್ತುಕೊಳ್ಳಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ