LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು  ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.

ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಇದಲ್ಲದೇ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತವಾಗಿದೆ. ಮರ, ಗಿಡಗಳ ಸಮೇತ ರಸ್ತೆಗೆ ಮಣ್ಣು ಕುಸಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.

ಇನ್ನು ಮಾರನಹಳ್ಳಿ ಸಮೀಪ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬದಲಿ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದ್ದಾರೆ. ಮಾರನಹಳ್ಳಿ ಬಳಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026