LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ "ಕರಾವಳಿ ಉತ್ಸವ"



ಮಂಗಳೂರು: ಡಿಸೆಂಬರ್ 21ರಿಂದ ಜನವರಿ 19ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ವನ್ನು ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ.



“ಕರಾವಳಿಯ ನೈಜ ಸಂಸ್ಕೃತಿಯ ಅನಾವರಣ, ಸಂಪ್ರದಾಯಗಳ ಪ್ರದರ್ಶನ, ಆಹಾರ ಖಾದ್ಯಗಳ ಪರಿಚಯ, ವಿವಿಧ ವಿನೋದಾವಳಿಗಳೊಂದಿಗೆ ನಮ್ಮ ಧೀಮಂತ ಸಾಂಸ್ಕೃತಿಕ ಪರಂಪರೆಯ ಆಸ್ವಾದನೆ ಇರಲಿದೆ. ಇವೆಲ್ಲವೂ ಒಂದೇ ಜಾಗದಲ್ಲಿ ತುಳುನಾಡಿನ ಜನತೆಗೆ ಲಭ್ಯವಾಗಲಿವೆ. ಕೆಲವು ವರ್ಷಗಳ ಬಳಿಕ ಇದೇ ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ ಮೈದಳೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿರುವ ಉತ್ಸವದಲ್ಲಿ ಕರಾವಳಿಯ ವೈವಿಧ್ಯತೆಗಳು ಸಾರ್ವಜನಿಕರನ್ನು ರಂಜಿಸಲಿವೆ..



ಉದ್ಘಾಟನಾ ಕಾರ್ಯಕ್ರಮ



ಡಿಸೆಂಬರ್ 21ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್‌ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ.



ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಿಸೆಂಬರ್ 21 ಮತ್ತು 22 ರಂದು ವಿದ್ಯುದ್ದೀಪಗಳಿಂದ ಅಲಂಕೃತವಾದ ವೇದಿಕೆಯಲ್ಲಿ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ.



“ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ವಸ್ತು ಪ್ರದರ್ಶನ



ವಸ್ತು ಪ್ರದರ್ಶನವು “ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ಪ್ರತ್ಯೇಕ ವಿಭಾಗಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲಿ ಕೈಮಗ್ಗ, ನೇಕಾರ, ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ.



ಆಹಾರ ಮೇಳ



ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ದತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ. ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳು ನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ.



ವಾಣಿಜ್ಯ ಮಳಿಗೆ



ಆಹಾರ ಉತ್ಪನ್ನಗಳು ಮಾತ್ರವಲ್ಲದೆ, ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ.



ಬೀಚ್ ಉತ್ಸವ



ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30 ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕರಾಗಿರುವ ಶ್ರೀಯುತ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ಎಂಟು ಗಂಟೆಗೆ ಪ್ರಾರಂಭವಾಗಲಿದ್ದು, ಸಾರ್ವಜನಿಕರನ್ನು ರಂಜಿಸಲಿದೆ.



ಡಿಸೆಂಬರ್ 29ರ ಭಾನುವಾರದಂದು ಬೆಳಗ್ಗೆ 5:30ಕ್ಕೆ ಯೋಗ, 6:30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಸಂಜೆ 5:30ಕ್ಕೆ ಆನೈನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ.



ಇತರೆ ವೈಶಿಷ್ಟ್ಯಗಳು:



ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್ ನಲ್ಲಿ ಆಟೋಮೊಬೈಲ್ ಮತ್ತು ಶ್ರಾನ ಪ್ರದರ್ಶನ ನಡೆಯಲಿದೆ. ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ. ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಸುಪ್ರಸಿದ್ದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ.



ಜಿಲ್ಲಾಡಳಿತದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವುಗಳ ಸಹಕಾರದಿಂದ ಆಕರ್ಷಕವಾಗಿ ಕರಾವಳಿ ಉತ್ಸವವನ್ನು ನಡೆಸಲು ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!