LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಹಾರದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಮಂಜರಿ ಜರುಹರ್ ಯಶೋಗಾಥೆ

ಬಿಹಾರ : ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾಗುವುದು ಕಷ್ಟಸಾಧ್ಯವಾಗಿದೆ. ಆದರೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಯಶಸ್ಸಿನ ಹಾದಿಯಲ್ಲಿನ ಅಡೆತಡೆಗಳನ್ನು ಮೆಟ್ಟಿನಿಂತು ಬಿಹಾರದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾದ ಮಂಜರಿ ಜರುಹರ್ ಯಶೋಗಾಥೆ ಇದು.

ಮಂಜರಿ ಜರುಹರ್ ಅವರು ಬಿಹಾರದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದು, ಅಖಿಲ ಭಾರತ ಮಟ್ಟದಲ್ಲಿ ಐದನೇ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದರು. ಬಿಹಾರದಲ್ಲಿ ಐಎಎಸ್ ಮತ್ತು ಐಪಿಎಸ್ ಕುಟುಂಬ ಸದಸ್ಯರನ್ನು ಹೊಂದಿರುವ ಪ್ರತಿಷ್ಠಿತ ಹಿನ್ನೆಲೆಯಿಂದ ಬಂದಿದ್ದರೂ, ಮಂಜರಿ ಅವರ ಪತಿಯ ಕುಟುಂಬವು ಅವರು ಗೃಹಿಣಿಯಾಗಿ ಇರಬೇಕೆಂದು ಕಾರಣ, ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಾಗಲಿಲ್ಲ.

ಕೇವಲ 19 ನೇ ವಯಸ್ಸಿನಲ್ಲಿ, ಮಂಜರಿ ಅವರು ಐಎಫ್‌ಎಸ್ ಅಧಿಕಾರಿಯನ್ನು ವಿವಾಹವಾದರು. ಅವರಿದ್ದ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರೆಯುವ ಬಯಕೆಗೆ ಪತಿ ಮತ್ತು ಅತ್ತೆ-ಮಾವಂದಿರ ಬೆಂಬಲ ದೊರೆಯಲಿಲ್ಲ. ಹೀಗೆ ವೈವಾಹಿಕ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ ಅವರು, ಅಂತಿಮವಾಗಿ ವಿಚ್ಛೇದನ ಪಡೆದರು.

ಪಾಟ್ನಾ ಮಹಿಳಾ ಕಾಲೇಜಿನಿಂದ ಇಂಗ್ಲಿಷ್‌ನಲ್ಲಿ ಗೌರವ ಪದವಿ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದ ಮಂಜರಿ ಅವರು, ವಿಚ್ಛೇದನದ ಬಳಿಕ ದೃತಿಗೆಡದೆ ಯುಪಿಎಸ್‌ಸಿ ಪರೀಕ್ಷೆಗಾಗಿ ತಯಾರಿ ನಡೆಸಿದರು.

ಮಂಜರಿ ಅವರು 1974 ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದರು. ಆದರೆ ಸಂದರ್ಶನದಲ್ಲಿ ವಿಫಲರಾದರು. ಬಳಿಕ 1975 ರಲ್ಲಿ ಮತ್ತೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು ಉತ್ತೀರ್ಣರಾಗುವಲ್ಲಿ ಯಶಸ್ವಿಯಾಗುತ್ತಾರೆ. ಈ ಮೂಲಕ ಐಪಿಎಸ್ ಹುದ್ದೆಯನ್ನು ಗಳಿಸುತ್ತಾರೆ.

ಆರಂಭದಲ್ಲಿ ಅವರು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್‌ನಲ್ಲಿ ಹಿರಿಯ ಪೊಲೀಸ್ ಅಧೀಕ್ಷಕಿಯಾಗಿ ನೇಮಕಗೊಂಡರು, ಇದು ಕೇವಲ ಕಚೇರಿಯ ಕೆಲಸವಾಗಿತ್ತು. ಆದರೆ ಅವರ ದೃಢ ಸಂಕಲ್ಪದಿಂದ ಅವರು ಫೀಲ್ಡ್ ಪೋಸ್ಟಿಂಗ್ ಪಡೆದರು. ಕಾಲಾನಂತರದಲ್ಲಿ, ಮಂಜರಿ ಅವರು ಮರುಮದುವೆಯಾಗಲು ನಿರ್ಧರಿಸಿ, ಐಪಿಎಸ್ ಅಧಿಕಾರಿಯಾದ ರಾಕೇಶ್ ಜರುಹರ್ ಅವರನ್ನು ವಿವಾಹವಾದರು.

ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ವಿಶೇಷ ಮಹಾನಿರ್ದೇಶಕಿಯಾಗಿ ನಿವೃತ್ತರಾದರು. ತಮ್ಮ ಅಧಿಕಾರಾವಧಿಯಲ್ಲಿ, ಅವರು ಬಿಹಾರ ಮತ್ತು ಜಾರ್ಖಂಡ್‌ನ ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಪೊಲೀಸ್ ಅಕಾಡೆಮಿ, ಸಿಐಎಸ್‌ಎಫ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026