LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್ ಒಂದರಂದು ಪೂಜ್ಯ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಬೆಂಗಳೂರು : ಶ್ರೀ ಜಗದ್ಗುರು ಶ್ರೀ ರೇಣಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮ ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11ಗಂಟೆಗೆ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕರ್ನಾಟಕ ರಾಜ್ಯ ಯುವ ವಿಭಾಗದ ಅಧ್ಯಕ್ಷರಾದ ಜಿ ಮನೋಹರ ಅಬ್ಬಿಗೆರೆ ಅವರು ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದವರು, ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರು ಮಾಡಲಿದ್ದಾರೆ ಮತ್ತು ದಿವ್ಯಸಾನಿಧ್ಯ ರಂಭಾಪುರಿ ಶಾಖ ಹಿರೇಮಠದ ಪೂಜ್ಯ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ., ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ, ಅರಣ್ಯ ಖಾತೆ ಸಚಿವರಾದ ಈಶ್ವ‌ರ್ ಖಂಡ್ರೆ ಅಧ್ಯಕ್ಷತೆ ಶಾಸಕರಾದ ಉದಯ್ ಗರುಡಚಾರ್ ರವರು ಉಪಸ್ಥಿತಂದಿರಲಿದ್ದಾರೆ.

ನಂತರ ಮಾತನಾಡಿದವರು  ಜಗದ್ಗುರು ಶ್ರೀ ರೇಣುಕಾಚಾರ್ಯ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವ ಸಮುದಾಯ ಪಾಲಿಸಬೇಕು ಆಗ ಜೀವನದಲ್ಲಿ ಯಶ್ವಸಿಯಾಗಲು ಸಾಧ್ಯ.  ರೇಣುಕಾಚಾರ್ಯರು ಮಾನ್ ಶರಣರು ಗುರು ಶ್ರೇಷ್ಠರು ಕನ್ನಡ ಭಾಷೆಯಲ್ಲಿ ಬದುಕು ಮತ್ತು ಪುರಾಣ ಮತ್ತು ಸಿದ್ದಾಂತಗಳ ಹಲವು ಪುರಾಣ ಗ್ರಂಥಗಳು ಇವೆ ಹರಜು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ವಿಶೇಷವಾಗಿ ಎರಡು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವುದು ಸಂತೋಷದ ಕರ ಸಂಗತಿ ಎಂದರು.

ಮಾರ್ಚ್ 1ರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ವಿನಂತಿ ಮಾಡಿಕೊಂಡರು.

ವೀಶೇಷ ಆಹ್ವಾನಿತರಾಗಿ ವೀರಶೈವ-ಲಿಂಗಾಯಿತ ಸಮನ್ವಯ ವೇದಿಕೆ ಸಂಚಾಲಕರಾದ ಪಾಲನೇತ್ರ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಹೆಚ್.ಎಂ.ರೇಣುಕಾ ಪ್ರಸನ್ನ. ರಾಜ್ಯ ಯುವ ಘಟಕ ರಾಜ್ಯಾಧ್ಯಕ್ಷರಾದ ಮನೋಹರ್ ಅಬ್ಬಿಗೆರೆ, ಬೆಂಗಳೂರುನಗರದ ಅಧ್ಯಕ್ಷರಾದ ಬಿ.ಆರ್.ನವೀನ್ ಕುಮಾರ್ ರವರು, ಯುವ ಘಟಕದ ಹರೀಶ್ ಮಹೇಶ್ ರವರು, ಭಾಗವಹಿಸಲಿದ್ದಾರೆ.

ಮಾರ್ಚ್ 1ರಂದು ಬೆಳಗ್ಗೆ 10ಗಂಟೆಗೆ ಹಡ್ನನ್ ಸರ್ಕಲ್ ನಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಪ್ರತಿಮೆ ಹೊತ್ತ ಭವ್ಯ ಮೆರವಣಿಗೆಯಲ್ಲಿ ರವೀಂದ್ರ ಕಲಾಕ್ಷೇತ್ರದವರಗೆ ಮೆರವಣಿಗೆ ಸಾಗಲಿದೆ. ವೀರಗಾಸೆ, ಕಂಸಾಳೆ, ತಮಟೆವಾದ್ಯ, ನಾದಸ್ವರ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿದೆ.

ಸಾಹಿತಿ ಪ್ರಶಾಂತ ರಿಪ್ಪನಪೇಟೆರವರಿಂದ ಉಪನ್ಯಾಸ ಮತ್ತು ಸಾಂಸ್ಕೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ