LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣು ಮಕ್ಕಳಿಗೆ ಮದುವೆಯ ವಯಸ್ಸು 18 ಆಗಿರಬೇಕು; ಇದರ ಮಹತ್ವ ಪಾಲಕರಿಗೆ ತಿಳಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ


ಬಳ್ಳಾರಿ,ಮೇ 23



ಹೆಣ್ಣು ಮಕ್ಕಳಿಗೆ ಮದುವೆಯ ವಯಸ್ಸು 18 ಆಗಿರಬೇಕು. ಇದರ ಅವಶ್ಯಕತೆ ಮತ್ತು ಮಹತ್ವದ ಬಗ್ಗೆ ಪಾಲಕರಿಗೆ ತಿಳಿಸುವ ಮೂಲಕ ಗರ್ಭಿಣಿ ಅವಧಿಯ ಗಂಡಾ0ತರಗಳನ್ನು ದೂರಗೊಳಿಸಲು ಅರಿವು ಮೂಡಿಸುವ ಕಾರ್ಯವಾಗಬಾಎಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಆರೋಗ್ಯ ಅಭಿಯಾನದ ಅಂತರ್ ಇಲಾಖೆ ಸಭೆಯಲ್ಲಿ ಅವರು ಮಾತನಾಡಿದರು.

ಶಿಶು ಜನನದ ನಂತರ ಉಂಟಾಗಬಹುದಾದ ತಾಯಿ ಮರಣಗಳನ್ನು ತಡೆಗಟ್ಟಲು ಪಾಲಕರಿಗೆ ಹೆಣ್ಣು ಮಗುವಿಗೆ 18 ವರ್ಷಗಳ ನಂತರ ಮದುವೆ ಮಾಡುವುದರ ಬಗ್ಗೆ ಮನದಟ್ಟು ಮಾಡಿಕೊಡಬೇಕು. ತಾಯ್ತನದ ಜವಾಬ್ದಾರಿ ಹಾಗೂ ವೈಜ್ಞಾನಿಕವಾಗಿ ಗರ್ಭಕೋಶದ ಸಂಪೂರ್ಣ ಬೆಳವಣಿಗೆ ಮಹತ್ವ ಸಹ ತಿಳಿಸುವ ಮೂಲಕ ಹೆಣ್ಣುಮಕ್ಕಳ ಕನಿಷ್ಠ 20 ವರ್ಷ ವಯಸ್ಸಿನ ನಂತರದ ಅವಧಿ ಗರ್ಭವತಿಯಾಗಲು ಸೂಕ್ತ ಸಮಯ ಎಂದು ಸಮುದಾಯದಲ್ಲಿ ಜಾಗೃತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಮರಣವನ್ನು ಶೂನ್ಯಕ್ಕೆ ತರಲು ಗರ್ಭಿಣಿ ಎಂದು ನೋಂದಣಿ ಮಾಡಿದ ದಿನದಿಂದಲೇ ಯಾವುದೇ ಸಣ್ಣ ಆರೋಗ್ಯ ಸಮಸ್ಯೆ ಕಂಡುಬoದರೂ ನಿರ್ಲಕ್ಷಿಸದೇ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಪರೀಕ್ಷೆ ಮಾಡಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

ಇದರ ಜೊತೆಗೆ ಗರ್ಭಿಣಿಯ ಆರೋಗ್ಯದ ಸಮಸ್ಯೆಗಳನ್ನು ಸ್ಥಳೀಯ ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸಾಧ್ಯವಾಗದಿದ್ದರೆ ಪಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವರಿಕೆ ಮಾಡಿ ಮೇಲ್ಮಟ್ಟದ ಆಸ್ಪತ್ರೆಗೆ ಮುಂಚಿತವಾಗಿ ಮಾಹಿತಿ ನೀಡಿ ಗರ್ಭಿಣಿಯನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡಬೇಕು ಎಂದರು.

ಚೊಚ್ಚಲು ಹೆರಿಗೆ, ಅಧಿಕ ರಕ್ತದೊತ್ತಡ, ಮೊದಲ ಹೆರಿಗೆ ಸಿಸೆರಿಯನ್ ಆಗಿದ್ದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಿಂದ ಸಕಾಲದಲ್ಲಿ ಇಲಾಖೆಯ ಆಂಬ್ಯುಲೆನ್ಸ್ ಅಥವಾ 108 ತುರ್ತು ವಾಹನ ವ್ಯವಸ್ಥೆ ಮೂಲಕ ಕಳುಹಿಸಬೇಕು. ತಾಲ್ಲೂಕ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಹಾಗೂ ಬಿಎಮ್‌ಸಿ ಆರ್.ಸಿ ಆಸ್ಪತ್ರೆಗಳಲ್ಲಿ ಸುಸಜ್ಜಿತ ಹೆರಿಗೆ ಸೌಲಭ್ಯ ಹಾಗೂ ನುರಿತ ವೈದ್ಯರು ಇರುವ ಕುರಿತು ಕ್ಷೇತ್ರ ಮಟ್ಟದಲ್ಲಿ ಜಾಗೃತಿ ನೀಡುವಂತೆ ತಿಳಿಸಿದರು.

ಗರ್ಭಿಣಿ ಎಂದು ತಿಳಿದ ದಿನದಿಂದಲೇ ಗರ್ಭಿಣಿಗೆ ಕಂಡು ಬರಬಹುದಾದ ಸಾಮಾನ್ಯ, ಗಂಭೀರ ಸಮಸ್ಯೆಗಳ ಕುರಿತು ಮುತುವರ್ಜಿ ವಹಿಸಲು ಕ್ಷೇತ್ರ ಮಟ್ಟದ ಸಿಬ್ಬಂದಿಯವರು ಸದಾ ತಾಯಿಯೊಂದಿಗೆ ಹಾಗೂ ಪಾಲಕರೊಂದಿಗೆ ಸಂಪರ್ಕದಲ್ಲಿರಬೇಕು. ಕಬ್ಬಿಣಾಂಶ ಮಾತ್ರೆ ಸೇವನೆಯಿಂದಾಗುವ ಪ್ರಯೋಜನ ತಿಳಿಸಬೇಕು ಎಂದರು.

ಜಿಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಆಸ್ಪತ್ರೆಯಲ್ಲಿ ಹೆರಿಗೆಯಾದಲ್ಲಿ ಸಹಜ ಹೆರಿಗೆ 48 ಗಂಟೆಗಳ ಕಾಲ, ಸಿಜರಿಯನ್ ಹೆರಿಗೆ ಐದು ದಿನಗಳ ಕಾಲ ಕಡ್ಡಾಯವಾಗಿ ದಾಖಲು ಮಾಡಿಕೊಂಡು ನಿರಂತರವಾಗಿ ತಾಯಿಯ ಆರೋಗ್ಯದ ಕುರಿತು ಪರಿಶೀಲಿಸಿ ವೈದ್ಯರು ಮತ್ತು ಸಿಬ್ಬಂದಿಯವರು ಯಾವುದೇ ಲೋಪವಿಲ್ಲದಂತೆ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಯೋಜನೆಯಡಿಯಲ್ಲಿ ದೊರಕುವ ಉಚಿತ ಊಟ, ಉಚಿತ ಔಷಧಿ, ಉಚಿತ ರಕ್ತ, ಉಚಿತ ಪರೀಕ್ಷೆ, ಉಚಿತ ನಗುಮಗು ವಾಹನ ಮೂಲಕ ಮನೆಗೆ ಬಿಡುವ ಕುರಿತು ಹಾಗೂ ಜನನಿ ಸುರಕ್ಷಾ ಯೋಜನೆಯಡಿ ಸಹಾಯಧನವನ್ನು ಅವರ ಖಾತೆಗೆ ಜಮೆ ಆಗುವ ಬಗ್ಗೆ ತಿಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್ ಬಸಾರೆಡ್ಡಿ, ವೈದ್ಯಕಿಯ ಅಧೀಕ್ಷಕಿ ಡಾ.ಇಂದುಮತಿ, ಪ್ರಸೂತಿ ವಿಭಾಗದ ಡಾ.ವಿರೇಂದ್ರಕುಮಾರ, ವಿಮ್ಸ್ ಮಕ್ಕಳ ವಿಭಾಗದ ಡಾ.ವಿಶ್ವನಾಥ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ವಿ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರಕುಮಾರ, ತಜ್ಞ ವೈದ್ಯರಾದ ಡಾ.ಬಾಲು ವೆಂಕಟೇಶ್, ಡಾ.ಕೊಟ್ರೇಶ್, ಡಾ.ಶ್ರೀಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು