E-PAPER
16 Nov 2026, 02:19:40 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಾಳೆಕುಂದ್ರಿ ತಾಂತ್ರಿಕ ಕಾಲೇಜಿನಲ್ಲಿ "ಮೇರಿ ದೇಶ್ ಕಿ ಧರತಿ" ಕಾರ್ಯಕ್ರಮ

ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ "ಮೇರಿ ದೇಶ್ ಕಿ ಧರತಿ" ಎಂಬ ವಿಶಿಷ್ಟ ಕಾರ್ಯಕ್ರಮ

ಬೆಳಗಾವಿ ನಗರದ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾನವನ ವೈಯಕ್ತಿಕ ಮತ್ತು ವ್ಯವಹಾರಿಕ ಜೀವನದಲ್ಲಿ ವಿಶಿಷ್ಟ ಸ್ವಾಸ್ಥ್ಯ ಆರೋಗ್ಯ ಸಾಧಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ , ತಾಯಿಯ ಮಡಿಲು ಮತ್ತು ಶಿವಾನಿ ಮ್ಯೂಸಿಕ್ ಕ್ಲಬ್, ಬೆಳಗಾವಿಯ ಸಹಯೋಗದಲ್ಲಿ "ಮೇರಿ ದೇಶ್ ಕಿ ಧರತಿ, ರೋಗಗಳು ಮತ್ತು ಅಸ್ವಸ್ಥತೆಗಳಿಗೆ ಮನೆಮದ್ದು" ಎಂಬ ಜಾಗೃತಿ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಹಾಗೂ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಆಯೋಜಿಸಿತ್ತು.

ವೇದಿಕೆಯ ಸಮಾರಂಭದಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಬೆಳಗಾವಿಯ ನಾಗನೂರು ಶ್ರೀ ರುದ್ರಾಕ್ಷಿಮಠದ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು, ಈಗಿನ ಯುವಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರಿಹೋಗುತ್ತಿದ್ದೂ ತಮ್ಮ ಆರೋಗ್ಯದ ಸ್ವಾಸ್ತ್ಯವಣ್ಣ ಹಾಳುಮಾಡಿಕೊಳ್ಳುತ್ತಿರುವುದು ದುರಾದೃಷ್ಟಕರ ವಿಷಯ ಹಾಗೂ ನಮ್ಮ ದೇಶದ ಸಂಸ್ಕೃತಿ, ವಿಶಿಷ್ಟವಾದ ಔಷಧಿ ಗುಣಗಳನ್ನ ಹೊಂದಿದ ಮಣ್ಣಿನ ಮಹತ್ವ, ಆಹಾರ ಪದ್ಧತಿಗಳನ್ನ ಅರಿತು ದೇಶೀಯ ಸಂಸ್ಕೃತಿಗೆ ಮರಳಿ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ತಾಯಿಯ ಮಡಿಲು ಸಂಸ್ಥೆಗೆ ಆಶೀರ್ವಾದ ರೂಪದ ಶುಭಾಶಯ ಕೋರಿ ಪ್ರಸಂಶಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಯಿಯ ಮಡಿಲು ಮತ್ತು ಶಿವಾನಿ ಮ್ಯೂಸಿಕ್ ಕ್ಲಬ್, ಬೆಳಗಾವಿಯ ನಿರ್ದೇಶಕರಾದ ಡಾ.ಆನಂದರಾಜ್ ಗವಿಮಠ ಅವರು ವಿವಿಧ ರೋಗಗಳು ಮತ್ತು ಅಸ್ವಸ್ಥತೆಗಳಿಗೆ ಚಮತ್ಕಾರಿ ಹಾಗೂ ಅತ್ಯಂತ ಸರಳವಾಗಿ ತಯಾರಿಸಬಹುದಾದ ಮನೆಮದ್ದುಗಳ ಬಗ್ಗೆ ಸವಿವರವಾಗಿ ತಿಳಿಹೇಳಿದರು.

ಮೇರಿ ದೇಶ್ ಕಿ ಧರತಿ ಜಾಗೃತಿ ಕಾರ್ಯಕ್ರಮದ ಅಡಿಯಲ್ಲಿ ಸಾಮಾನ್ಯ ಕಾಯಿಲೆಗಳಿಗೆ ಸಾಂಪ್ರದಾಯಿಕ ಚಿಕಿತ್ಸೆಗಳು ಮತ್ತು ಮನೆಮದ್ದುಗಳ ಜೊತೆಗೆ ಮಧುರ ಮತ್ತು ಲಯಬದ್ಧವಾದ ಹಾಡುಗಳ ಮೂಲಕ ಮ್ಯೂಸಿಕ್ ಥೆರಪಿಯ ಉಪಯೋಗಗಳು, ಪಿರಮಿಡ್ ಧ್ಯಾನ - ಶಕ್ತಿ ಪಿರಮಿಡ್‌ಗಳ ಅಡಿಯಲ್ಲಿ ಗಮನ ಮತ್ತು ಆಂತರಿಕ ಶಾಂತಿಯನ್ನು ಹೇಗೆ ಅನ್‌ಲಾಕ್ ಮಾಡುವುದು ಎಂಬ ವಿಷಯಗಳ ಮೇಲೆ ನೈಸರ್ಗಿಕವಾದ ಪ್ರಯೋಗಗಳನ್ನ ವೇದಿಕೆ ಮೇಲೆ ನೆರವೇರಿಸಿದರು.

ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಎಫ್.ವಿ.ಮಾನ್ವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದರು, ಪ್ರಾಚಾರ್ಯರಾದ ಡಾ. ಬಿ. ಆರ್. ಪಟಗುಂದಿ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ಮಂಜುನಾಥ ಶರಣಪ್ಪನವರ ಅವರು ಕಾರ್ಯಕ್ರಮವನ್ನ ಆಯೋಜಿಸಿ ವಂದಿಸಿದರು. ಪ್ರೊ. ಚಿತ್ರಶ್ರೀ ಅತಿಥಿಗಳನ್ನ ಪರಿಚಯಿಸಿದರು, ಪ್ರೊ. ಸುಶ್ಮಿತಾ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ