ಶಿವಮೊಗ್ಗ, ಮೇ .29 : ಶಿವಮೊಗ್ಗ ನಗರ ಉಪವಿಭಾಗ-1, ಘಟಕ -2 ರ ವ್ಯಾಪ್ತಿಯಲ್ಲಿ ಮೇ 31 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ರಾಘವೇಂದ್ರ ಸ್ವಾಮಿ ಮಠ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶನಿ ಮಹಾತ್ಮ ದೇವಸ್ಥಾನ ರಸ್ತೆ, ವಿದ್ಯುತ್ ಪರಿವೀಕ್ಷಕರ ಕಚೇರಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.