LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೀನಾಮೆ ಕೇಳುವವರಿಗೆ ದೇವಿ ಒಳ್ಳೆ ಬುದ್ದಿ ಕೊಡಲಿ

ಮೈಸೂರು,ಅ.03:ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು.

ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾರೆಲ್ಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ ಎಲ್ಲರೂ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ರಾಜೀನಾಮೆ ಕೊಡಬೇಕು ಎಂದು ಯಾವ ನ್ಯಾಯಾಲಯವು ಹೇಳಿಲ್ಲ ರಾಜ್ಯಪಾಲರು ಕೂಡ ಹೇಳಿಲ್ಲ ಹೀಗಿರುವಾಗ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಬಿಜೆಪಿಯವರಾಗಲಿ ಜೆಡಿಎಸ್ ನವರಾಗಲಿ ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಜಿ ಟಿ ದೇವೇಗೌಡ ಗುಡುಗಿದರು.

ನ್ಯಾಯಾಲಯದ ತೀರ್ಪನ್ನ ಸರಿಯಾಗಿ ಅರ್ಥ ಮಾಡಿಕೊಳ್ಳದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದ ಅವರು, ಎಫ್‌ಐಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ಕೊಡಬೇಕೆಂಬ ನಿಯಮವಿಲ್ಲ ಈಗಾಗಲೇ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಆದರೆ ಅವರು ಯಾರು ಕೂಡ ರಾಜೀನಾಮೆ ನೀಡಿಲ್ಲ.

ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ರಾಜೀನಾಮೆ ನೀಡಬೇಕು ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST