LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರ ಭಾಷಣದಲ್ಲಿ ಸರಕಾರದ ದೂರದೃಷ್ಟಿಯ ಅನಾವರಣ: ಎಂ ಬಿ ಪಾಟೀಲ

ಬೆಂಗಳೂರು: ಬಜೆಟ್ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ರಾಜ್ಯದ ಅಭಿವೃದ್ಧಿ ಮತ್ತು ಸಮಗ್ರ ಬೆಳವಣಿಗೆಯ ಬಗ್ಗೆ ಹೊಂದಿರುವ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಸರಕಾರವು ಕ್ವಿನ್ ಸಿಟಿ, ವಿಮಾನ‌ ನಿಲ್ದಾಣಗಳ ನಿರ್ಮಾಣ, ಏರ್-ಸ್ಟ್ರಿಪ್ ಅಭಿವೃದ್ಧಿ, ಸಿಗ್ನೇಚರ್ ಪಾರ್ಕ್ ಮುಂತಾದ ಮಹತ್ವದ ಯೋಜನೆಗಳ ಬಗ್ಗೆ ಹೊಂದಿರುವ ಬದ್ಧತೆ ಯನ್ನು ರಾಜ್ಯಪಾಲರ ಭಾಷಣದಲ್ಲಿ ಕಾಣಬಹುದು' ಎಂದಿದ್ದಾರೆ.

ಸರಕಾರವು ಸಮಗ್ರ ಕೈಗಾರಿಕಾ ಪ್ರಗತಿಗೆ ಸಂಕಲ್ಪ ಮಾಡಿದ್ದು, ಮೂಲಸೌಕರ್ಯ ಅಭಿವೃದ್ಧಿಗೂ ಅದ್ಯತೆ ನೀಡುತ್ತಿದೆ. ಇವುಗಳ ಜತೆಗೆ ತೋಟಗಾರಿಕೆ ವಲಯದ ವಿಸ್ತರಣೆ, ಹೊಸ ತಳಿಗಳ ಸಂಶೋಧನೆ ಮೂಲಕ ರೈತ ಸಮುದಾಯದ ಏಳ್ಗೆಯತ್ತಲೂ ಚಿತ್ತ ನೆಟ್ಟಿದೆ. ಇದು ನಮ್ಮ ಸಮತೋಲನದ ದೃಷ್ಟಿಯನ್ನು ಸಂಕೇತಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರಿಗೆ ಭದ್ರತೆಯ ಭಾವನೆ ಒದಗಿಸಿದೆ. ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿಯ ಅನುಷ್ಠಾನ ಎರಡಕ್ಕೂ ಸಿದ್ದರಾಮಯ್ಯ ಒತ್ತು ನೀಡುತ್ತಿರುವುದು ಗಮನಾರ್ಹವಾಗಿದೆ ಎಂದು ಪಾಟೀಲ ನುಡಿದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ