ಬೆಂಗಳೂರು: ಇದೇ ತಿಂಗಳ 24ರಂದು ನಿಗದಿಯಾಗಿದ್ದ ಎಂಬಿಎ ಮತ್ತು ಎಂಸಿಎ ಕೋರ್ಸ್‌ಗಳ ಪಿಜಿಸಿಇಟಿ ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಹಿನ್ನೆಲೆ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ. ಮೇ 23ರಂದು ಎಂ.ಟೆಕ್, ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ಪೂರ್ವ ನಿಗದಿಯಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.