Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪತ್ರಿಕಾ ವಿತರಿಕರಿಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ: 2 ಕೋಟಿ ಕ್ಷೇಮ ನಿಧಿ-ಪ್ರಭಾಕರ್

 

ತುಮಕೂರು :
ನಾನು ಪತ್ರಕರ್ತ ಆಗುವುದಕ್ಕಿಂತ ಮೊದಲು ನಾನೊಬ್ಬ ಪತ್ರಿಕಾ ವಿತರಕ. ಪತ್ರಿಕಾ ವಿತರಣೆ ತಪಸ್ಸಿನ ಕೆಲಸ. ಮಳೆ, ಗಾಳಿ, ಚಳಿಗೆ ಈ ತಪಸ್ಸು ಭಂಗ ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮೂರನೇ ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚಾರಣೆಯಲ್ಲಿ ಮಾತನಾಡಿದರು.

ಪತ್ರಿಕಾ ವಿತರಕರು ಪತ್ರಿಕಾ ವೃತ್ತಿಯ ಅವಿಭಾಜ್ಯ ಅಂಗ. ಪತ್ರಿಕಾ ವೃತ್ತಿಗೆ ಸಂಬಂಧಪಟ್ಟ ಅನುಕೂಲ, ಸವಲತ್ತುಗಳು, ಪ್ರಶಸ್ತಿಗಳ ವಿಚಾರ ಬಂದಾಗ ಪತ್ರಿಕಾ ವಿತರಕರು ಹೊರಗೇ ಉಳಿದು ಬಿಡುತ್ತಾರೆ. ಹೀಗಾಗಿ ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳನ್ನು ನೀಡುವಾಗ ಒಂದು ಪ್ರಶಸ್ತಿ ವಿತರಿಕರಿಗೆ ಮೀಸಲಿಡುವ ದಿಕ್ಕಿನಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನಿಸುವ ಭರವಸೆ ನೀಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘವನ್ನು ವಿತರಕರ ಸಹಕಾರ ಸಂಘವನ್ನಾಗಿ ಮಾರ್ಪಡಿಸಿದರೆ ನಾನಾ ರೀತಿಯ ಸಹಕಾರ ಮತ್ತು ನೆರವುಗಳು ಒದಗಿ ಬರುತ್ತವೆ. ಸಂಘದ ಪದಾಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಎಂದು ಸಲಹೆ ನೀಡಿದರು.

ಪತ್ರಿಕಾ ವಿತರಕರ ಸಂಘದ ಕ್ಷೇಮಾಭಿವೃದ್ಧಿಗೆ 2 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಖಂಡಿತಾ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಭೆಗೆ ತಿಳಿಸಿದರು.

ಸಿದ್ದರಬೆಟ್ಟ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಸ್ವಾಮಿ ಜಪಾನಂದಜೀ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಪ್ರಜಾ ಪ್ರಗತಿ ಪತ್ರಿಕೆ ಸಂಪಾದಕ ಎಸ್.ನಾಗಣ್ಣ, ಶಾಸಕ ಜ್ಯೋತಿಗಣೇಶ್, ಹಿರಿಯ ಪತ್ರಕರ್ತ ಮಲ್ಲಿಕಾರ್ಜುನಯ್ಯ ಮತ್ತು ಪತ್ರಕರ್ತರ ಸಂಘ ಮತ್ತು ಪತ್ರಿಕಾ ವಿತರಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ