E-PAPER
20 Nov 2026, 12:17:44 AM|
Gold₹13023/gGold24K ₹13,023/g - 22K ₹11,927/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೇಕೆದಾಟು ಯೋಜನೆಗೆ ಪಕ್ಷಭೇದ ಮರೆತು ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ಎಲ್ಲರೂ ಪಕ್ಷಭೇದ ಮರೆತು ಒಂದೇ ಧ್ವನಿಯಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹೀಗಿರುವಾಗ ಕೆಲವರು ಅಸೂಯೆಯಿಂದ ಮಾತನಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಜ್ಞಾನಜ್ಯೋತಿ ಸಭಾಂಗಣ ಹಾಗೂ ನೆಹರು ತಾರಾಲಯದ ಬಳಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರೂ ಮೇಕೆದಾಟು ಯೋಜನೆ ಜಾರಿಯಾಗಬೇಕು ಎಂದು ಹೇಳಿದ್ದಾರೆ. ಒಂದೇ ದಿನದಲ್ಲಿ ಅನುಮತಿ ಪಡೆದುಕೊಂಡು ಬರುತ್ತೇನೆ ಎಂದಿದ್ದರು. ಬಹುಶಃ ಅವರು ಆ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ತಂದೆ ದೇವೇಗೌಡರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ ಅವರ ಮಗ ಅಸೂಯೆಯಿಂದ ಏನೇನೋ ಮಾತನಾಡಬಹುದು. ಅದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ ಎಂದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ. ಕರ್ನಾಟಕ ತನ್ನ ವ್ಯಾಪ್ತಿಯಲ್ಲಿ ಅಣೆಕಟ್ಟು ನಿರ್ಮಿಸಿಕೊಳ್ಳಬಹುದು ಹಾಗೂ ತಮಿಳುನಾಡಿಗೆ ಸಲ್ಲಬೇಕಾದ ನೀರನ್ನು ನೀಡಬೇಕು ಎಂಬ ನಿಲುವನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ತಮಿಳುನಾಡಿನವರು ಕೆಳಭಾಗದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದರೂ ನಾವು ಆಕ್ಷೇಪ ವ್ಯಕ್ತಪಡಿಸಲು ಹೋಗಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಈ ಆದೇಶ ಹೊರಬಂದಿತ್ತು. ಬಳಿಕ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯೂ ತಿರಸ್ಕೃತವಾಗಿದೆ. ಸದ್ಯ ನಾವು ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಸಲ್ಲಿಸಿದ್ದೇವೆ. ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಗೆ ಪರ್ಯಾಯ ಭೂಮಿ ಒದಗಿಸುವ ನಿಟ್ಟಿನಲ್ಲಿಯೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ವಿವರಿಸಿದರು.

ಮೇಕೆದಾಟು ಯೋಜನೆ ಯಾವುದೇ ಒಂದು ಪಕ್ಷದ ಅಥವಾ ವ್ಯಕ್ತಿಯ ವಿಚಾರವಲ್ಲ. ಇದು ಇಡೀ ರಾಜ್ಯದ ಹಿತಾಸಕ್ತಿಯ ಪ್ರಶ್ನೆಯಾಗಿದೆ. ಈ ಯೋಜನೆಯಿಂದ ಮಂಡ್ಯ, ಹಾಸನ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಿಗೆ ನೇರ ಅನುಕೂಲವಾಗಲಿದೆ. ಪ್ರಮುಖವಾಗಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯಲಿದೆ. ಮೇಕೆದಾಟು ಸಮತೋಲಿತ ಅಣೆಕಟ್ಟೆಯಾಗಿದ್ದು, ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಕೃಷಿ ಉದ್ದೇಶಕ್ಕೆ ಈ ನೀರನ್ನು ಬಳಸುವ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಇಂದು ಜಗತ್ತಿನಾದ್ಯಂತ ಜನರನ್ನು ಆಕರ್ಷಿಸುತ್ತಿದೆ. ವಿವಿಧ ಭಾಗಗಳಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಅವರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿ. ಈ ಯೋಜನೆಯ ಮಹತ್ವವನ್ನು ಪ್ರಧಾನಮಂತ್ರಿಗಳ ಮುಂದೆಯೂ ಪ್ರಸ್ತಾಪಿಸಿದ್ದೇನೆ ಎಂದರು.

ಬರಗಾಲದಂತಹ ಸಂಕಷ್ಟದ ಸಂದರ್ಭಗಳಲ್ಲಿ 66 ಟಿಎಂಸಿ ನೀರು ಬಿಡಬೇಕಾದ ಸಮಯದಲ್ಲಿ ಮೇಕೆದಾಟು ಜಲಾಶಯದಿಂದ ಅನುಕೂಲವಾಗಲಿದೆ. ತಮಿಳುನಾಡಿನವರು ಯಾವುದೇ ಆಕ್ಷೇಪ ವ್ಯಕ್ತಪಡಿಸಿದರೂ ನಾವು ಕಾನೂನಿನ ಚೌಕಟ್ಟಿನಲ್ಲಿಯೇ ಹೋರಾಡಿ ನ್ಯಾಯ ಪಡೆದುಕೊಂಡಿದ್ದೇವೆ. ಕರ್ನಾಟಕಕ್ಕೆ ಎಷ್ಟು ನ್ಯಾಯ ಸಿಗಬೇಕೋ ಅಷ್ಟೇ ನ್ಯಾಯ ತಮಿಳುನಾಡಿಗೂ ಸಿಗಬೇಕು ಎಂಬುದು ನಮ್ಮ ನಿಲುವು. ನ್ಯಾಯಾಲಯದ ಆದೇಶ ಹಾಗೂ ಕಾನೂನನ್ನು ಗೌರವಿಸಿ ಪಾಲಿಸುತ್ತೇವೆ ಎಂದು ತಿಳಿಸಿದರು.

ಪ್ರತಿ ತಿಂಗಳು ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಪರಿಶೀಲನೆ :

ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ, ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಆಹಾರ ಭದ್ರತಾ ಯೋಜನೆಗಳು ನಮ್ಮ ಹೃದಯಕ್ಕೆ ಹತ್ತಿರವಾದ ಯೋಜನೆಗಳಾಗಿವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಪ್ರತಿ ತಿಂಗಳು ಶಾಸಕರು ಮತ್ತು ಅಧಿಕಾರಿಗಳು ಹಾಗೂ ಪ್ರತಿದಿನ ನೌಕರರು ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಊಟ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರಿಶೀಲಿಸಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಿದ್ದೇನೆ ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಘಟನೆಯ ನಾಯಕರು ಹಾಗೂ ಕಾರ್ಯಕರ್ತರು ಮಾತುಕತೆಗೆ ಬರುವಂತೆ ತಿಳಿಸಿದ್ದೇನೆ. ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ದಟ್ಟಣೆ ನಿಯಂತ್ರಣಕ್ಕೆ ʼನೂತನ ರಸ್ತೆ ಗ್ರಿಡ್ ವ್ಯವಸ್ಥೆʼ : ಸಿಎಂ ಡಿ.ಕೆ.ಶಿವಕುಮಾರ್ʼಬಸವ ಮಂಟಪ’ ಕೃತಿ ವಿವಾದ; ಲೇಖಕ ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಎಫ್‍ಐಆರ್ ದಾಖಲುಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ಅರ್ಜಿ ವಜಾ2,321 ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ರಸ್ತೆಗಳ ವೈಟ್ ಟ್ಯಾಪಿಂಗ್ : ಸಂಪುಟ ತೀರ್ಮಾನ‘ಬಸವ ಮಂಟಪ’ ಕೃತಿ ಮುಟ್ಟುಗೋಲು; ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ : ಸಂಪುಟ ಸಭೆ ನಿರ್ಣಯಸಿಸಿಬಿಗೆ ರೌಡಿ ನಿಗ್ರಹ ದಳ ಎಂದು ಮರುನಾಮಕರಣಎಸಿ ರೂಂನಲ್ಲಿದ್ದ ಹಲವು ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿ ರಾಹುಲ್ ಗಾಂಧಿ ಬೀದಿಗೆ ತಂದಿದ್ದಾರೆ : ವಿನಯ್ ಕುಮಾರ್ ಸೊರಕೆತಾ.ಪಂ, ಜಿ.ಪಂ ಕ್ಷೇತ್ರ ಮೀಸಲು ಅಂತಿಮ ಅಧಿಸೂಚನೆ ಶುಕ್ರವಾರ ಪ್ರಕಟ : ಸಚಿವ ಈಶ್ವರ್ ಖಂಡ್ರೆʼSIRʼ ಅಂತಿಮ ಪಟ್ಟಿ ತಿರಸ್ಕರಿಸಿ ಸಾಮಾಜಿಕ ಪರಿಶೋಧನೆ ನಡೆಸಿ : ಎಸ್‍ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಂಪುಟ ಸಮ್ಮತಿ : ಸಚಿವ ಈಶ್ವರ್‌ ಖಂಡ್ರೆ