LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೂರ್ವ ಮುಂಗಾರು, ಕುಡಿಯುವ ನೀರು ಹಾಗೂ ಚುನಾವಣೆ ತಯಾರಿ ಸಂಬಂಧ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು:ಪೂರ್ವ ಮುಂಗಾರು ಮಳೆ ಪ್ರಾರಂಭಕ್ಕೂ ಮುಂಚುತವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೂಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪುರ್ವ ಮುಂಗಾರು ಮಳೆಗೆ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು, ಕುಡಿಯುವ ನೀರು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಈಗಲೇ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ ಸದರಿ ಪ್ರದೇಶಗಲ್ಲಿ ಪ್ರವಾಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತಿ ಸರಗವಾಗಿ ನೀರು ಹರಿದುಹೋಗುವಂತೆ ಮಾಡಬೇಕು. ಅಲ್ಲದೇ ರಸ್ತೆ ಬದಿಯ ಡ್ರೈನ್ ಗಳು ಸ್ವಚ್ಛವಾಗಿರುವಂತೆ ನೋಡಿಕೊಂಡು ರಸ್ತೆ ಮೇಲೆ ಬಿದ್ದಂತಹ ನೀರು ಸರಾಗವಾಗಿ ಹೋಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಆಯಾ ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ಪೊರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳನ್ನು ಈಗಾಗಲೇ ವಲಯವಾರು ನಿಯೋಜನೆ ಮಾಡಲಾಗಿದ್ದು, ನೀರು ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.

ಪಾಲಿಕೆ ವ್ಯಾಪ್ತಿಗೆ ಬರುವ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಲಮಂಡಳಿ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆಗೆ ನೀರಿನ ಸಂಬಂಧ ಬರುವ ದೂರುಗಳನ್ನು ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾವಹಿಸಿ

ಲೋಕಸಭಾ ಚುನಾವಣೆಗೆ ಹಿನ್ನೆಲೆ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಿಯೂ ಜನಪ್ರತಿನಿಧಿಗಳಿರುವ ಜಾಹೀರಾತುಗಳು ಇಲ್ಲದಂತೆ ನೋಡಿಕೊಳ್ಳಬೇಕು. ಆಯಾ ವಲಯಗಳಲ್ಲಿ ಎಲ್ಲಾ ಪೋಸ್ಟರ್, ಬ್ಯಾನರ್ ಗಳಿದ್ದರೆ ಕೂಡಲೆ ಅವುಗಳನ್ನು ತೆರವುಗೊಳಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಸಾರ್ವಜನಿಕ ಸ್ಥಳ, ಬಸ್ ತಂಗುದಾಣಗಲ್ಲಿ ಅಳವಡಿಸಿರುವಂತ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಾಣದಂತೆ ಮುಚ್ಚಬೇಕು. ಇನ್ನು ಗೋಡೆಗಳ ಮೇಲೆ ಬರೆದಿರುವಂತಹ ಬರಹಗಳನ್ನು ಕೂಡಲೆ ತೆರವುಗೊಳಿಸಬೇಕು. ಗೋಡೆಗಳ ಮೇಲೆ ಅಂಟಿಸಿರುವಂತೆ ಬಿತ್ತಿಪತ್ರಗಳನ್ನು ಕೂಡಲೆ ತೆರವುಗೊಳಿಸಬೇಕೆಂದು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರೋಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧ