LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಮಾಡಲು  ಮೀಜಿಗಳು-ಚಿಂತಕರ ಒಕ್ಕೋರಲ ಒತ್ತಾಯ

ಬೆಂಗಳೂರು: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.


ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು.

ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.

ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು