LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು..!!

ನವದೆಹಲಿ : ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಹೊರ ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ.

ಈ ಹಂತದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಿದ ಆದೇಶದ ಪ್ರಕಾರ ಮಾಡಲಾಗುತ್ತಿರುವುದು ಕೇವಲ ವಿಸ್ತೃತ ಯೋಜನಾ ವರದಿ ತಯಾರಿಕೆ ಅಷ್ಟೇ ಆಗಿದೆ. ಅದೂ ತಮಿಳುನಾಡಿನ ಆಕ್ಷೇಪಣೆಗಳನ್ನು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ತಜ್ಞರನ್ನು ಪರಿಗಣಿಸಿದ ನಂತರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಡಿಪಿಆರ್ ಪರಿಗಣಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳ ಪೂರ್ವಾನುಮೋದನೆಯು ಪೂರ್ವಾಪೇಕ್ಷಿತವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಆ ವಿಷಯದ ದೃಷ್ಟಿಯಿಂದ, ಪ್ರಸ್ತುತ ತಮಿಳುನಾಡಿನ ಅರ್ಜಿಯು ಅಪ್ರಸ್ತುತವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026